ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರ ಲಾಕ್‌ಡೌನ್ ನಿರ್ಧಾರ ತೆಗೆದುಕೊಳ್ಳಬೇಕಿತ್ತು: ಅಶೋಕ್ ಗೆಹ್ಲೋಟ್

Last Updated 8 ಮೇ 2021, 15:06 IST
ಅಕ್ಷರ ಗಾತ್ರ

ಜೈಪುರ: ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ತಡೆಗಟ್ಟಲು ಹಲವು ರಾಜ್ಯಗಳು ಲಾಕ್‌ಡೌನ್ ನಿರ್ಬಂಧ ಹೇರಿರುವ ಬೆನ್ನಲ್ಲೇ, ಜನರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಕೇಂದ್ರ ಸರ್ಕಾರವೇ ಲಾಕ್‌ಡೌನ್ ನಿರ್ಧಾರವನ್ನು ತೆಗೆದುಕೊಳ್ಳಬೇಕಿತ್ತು ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

‘ಸೋಂಕು ಹರಡುವನ್ನು ತಡೆಗಟ್ಟಲು ಎಂದಿಗಿಂತಲೂ ಈಗ ಹೆಚ್ಚಿನ ಲಾಕ್‌ಡೌನ್ ಅಗತ್ಯವಿದೆ ಎಂಬುದು ನನ್ನ ಅಭಿಪ್ರಾಯ. ಹಿಂದಿನ ಅನುಭವದ ಆಧಾರದ ಮೇಲೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಬೇಕಿತ್ತು. ಕಾರ್ಮಿಕರು ಸೇರಿದಂತೆ ಜನಸಾಮಾನ್ಯರು ಕಷ್ಟಗಳನ್ನು ಎದುರಿಸಬೇಕಾಗಿದೆ’ ಎಂದು ಗೆಹ್ಲೋಟ್ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

‘ಗ್ರಾಮೀಣ ಪ್ರದೇಶಗಳಲ್ಲೂ ಸೋಂಕು ವೇಗವಾಗಿ ಹರಡುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಮೇ 10ರಿಂದ 24ರವರಗೆ ರಾಜಸ್ಥಾನದಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಯಾಗಲಿದೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕ ಕರ್ತವ್ಯವಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT