ಗುರುವಾರ , ಮೇ 6, 2021
33 °C

ಕೋವಿಡ್: ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಸಿಬಲ್ ಆಗ್ರಹ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ದೇಶದಲ್ಲಿ ಕೋವಿಡ್‌ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿರುವುದರಿಂದ ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಬೇಕು’ ಎಂದು ಹಿರಿಯ ಕಾಂಗ್ರೆಸ್‌ ನಾಯಕ ಕಪಿಲ್‌ ಸಿಬಲ್‌ ಅವರು ಪ್ರಧಾನಿ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಅಲ್ಲದೆ ಈ ಸಂದರ್ಭದಲ್ಲಿ ಚುನಾವಣಾ ರ‍್ಯಾಲಿಗಳನ್ನು ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

‘ಚೇತರಿಕೆಗಿಂತ ವೇಗವಾಗಿ ಸೋಂಕುಗಳು ಹರಡುತ್ತಿವೆ. ಮೋದಿಜೀ ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ. ಚುನಾವಣಾ ಆಯೋಗವು ರ‍್ಯಾಲಿಗಳನ್ನು ನಿರ್ಬಂಧಿಸಬೇಕು. ನ್ಯಾಯಾಲಯಗಳು ಜನರ ಜೀವನವನ್ನು ರಕ್ಷಿಸಬೇಕು’ ಎಂದು ಕಪಿಲ್‌ ಸಿಬಲ್‌ ಟ್ವೀಟ್‌ ಮಾಡಿದ್ದಾರೆ.

‘ದೇಶದಲ್ಲಿ ಒಂದೇ ದಿನದಲ್ಲಿ 2,61,500 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 1,47,88,109ಕ್ಕೆ ಏರಿಕೆಯಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ದೇಶದಲ್ಲಿ ಕಳೆದ ನಾಲ್ಕು ದಿನಗಳಿಂದ  2 ಲಕ್ಷಕ್ಕಿಂತ ಅಧಿಕ ಪ್ರಕರಣಗಳು ವರದಿಯಾಗುತ್ತಿವೆ.

ಇವನ್ನೂ ಓದಿ...

ದೆಹಲಿ: ಒಂದೇ ದಿನ 24 ಸಾವಿರ ಪ್ರಕರಣ, ಪ್ರತಿ 4 ಪರೀಕ್ಷೆಯಲ್ಲಿ ಒಂದು ಪಾಸಿಟಿವ್‌

ಕೋವಿಡ್: ತೊಂದರೆಗೀಡಾಗಿರುವ ರಾಜ್ಯಗಳಿಗೆ ಮುಂದಿನ ವಾರದೊಳಗೆ ಇನ್ನಷ್ಟು ಲಸಿಕೆ

Covid-19 India Update: 2.61 ಲಕ್ಷ ಹೊಸ ಪ್ರಕರಣ, 1,501 ಮಂದಿ ಸಾವು

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು