ಶನಿವಾರ, ಜನವರಿ 28, 2023
13 °C

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿ: ಸಂಜಯ್ ರಾವುತ್

ಮೃತ್ಯುಂಜಯ ಬೋಸ್‌ Updated:

ಅಕ್ಷರ ಗಾತ್ರ : | |

ಮುಂಬೈ: ಬೆಳಗಾವಿ ಮತ್ತು ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಿವಸೇನಾ, ಬೆಳಗಾವಿಯ ವಿವಾದಿತ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕೆಂದು ಹೇಳಿದೆ.

‘ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿ’ಎಂದು ಶಿವಸೇನಾ ಮುಖಂಡ ಸಂಜಯ್ ರಾವುತ್ ಹೇಳಿದ್ದಾರೆ.

ಶರದ್ ಪವಾರ್ ನೇತೃತ್ವದಲ್ಲಿ ನಮ್ಮ ಜನ ಬೆಳಗಾವಿಗೆ ಹೋಗಲು ಸಿದ್ಧರಿದ್ದಾರೆ ಎಂದು ರಾವುತ್ ಹೇಳಿದ್ದಾರೆ.

‘ಮಹಾರಾಷ್ಟ್ರ ಎಲ್ಲವನ್ನೂ ತಾಳ್ಮೆಯಿಂದ ವೀಕ್ಷಿಸುತ್ತಿದೆ. ಆದರೆ, ಅದಕ್ಕೂ ಒಂದು ಮಿತಿ ಇದೆ. 24 ಗಂಟೆಗಳ ಅವಧಿಯಲ್ಲಿ ವಾಹನಗಳ ಮೇಲಿನ ದಾಳಿ ನಿಲ್ಲದಿದ್ದರೆ ನಮ್ಮ ತಾಳ್ಮೆ ಬೇರೆ ಸ್ವರೂಪ ಪಡೆದುಕೊಳ್ಳಲಿದೆ’ ಎಂದು ರಾವುತ್ ಹೇಳಿದ್ದಾರೆ. ಅಗತ್ಯಬಿದ್ದರೆ ಬೆಳಗಾವಿಗೆ ಹೋಗುವುದಾಗಿಯೂ ಪವಾರ್ ಹೇಳಿರುವುದಾಗಿಯೂ ರಾವುತ್ ಹೇಳಿದ್ದಾರೆ.

ವಿವಾದ ಬಗೆಹರಿಸುವ ಕುರಿತಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಢಣವೀಸ್, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಮಾತುಕತೆ ನಡೆಸಿದ ಕೆಲ ಗಂಟೆಗಳ ಬಳಿಕ ರಾವುತ್ ಈ ಹೇಳಿಕೆ ನೀಡಿದ್ದಾರೆ.

‘ಬೆಳಗಾವಿಯಲ್ಲಿ ಏನಾಗುತ್ತಿದೆ ಎಂಬುದು ಗೊತ್ತಾಗುತ್ತಿಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲೂ ಬಿಜೆಪಿ ಸರ್ಕಾರವಿದೆ’ಎಂದು ರಾವುತ್ ಹೇಳಿದ್ದಾರೆ.

ಇದನ್ನೂ ಓದಿ..

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು