ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ರಾಷ್ಟ್ರೀಯ ವಿಪತ್ತು ಘೋಷಣೆಗೆ ಆಗ್ರಹ –ಸಂಜಯ್‌ ರಾವುತ್‌

Last Updated 29 ಏಪ್ರಿಲ್ 2021, 8:15 IST
ಅಕ್ಷರ ಗಾತ್ರ

ಮುಂಬೈ: ಕೋವಿಡ್‌–19 ಸಾಂಕ್ರಾಮಿಕವನ್ನು ’ರಾಷ್ಟ್ರೀಯ ವಿಪತ್ತು‘ ಎಂದು ಘೋಷಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿರುವುದಾಗಿ ಶಿವಸೇನಾ ಸಂಸದ ಸಂಜಯ್‌ ರಾವುತ್‌ ಗುರುವಾರ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಕೋವಿಡ್‌ ಪರಿಸ್ಥಿತಿ ನಿಭಾಯಿಸಲು ರಾಷ್ಟ್ರದ ಇತರೆಡೆ ಮಹಾರಾಷ್ಟ್ರ ಮಾದರಿ ಅನುಸರಿಸಬೇಕು ಎಂದರು.

ಪ್ರಧಾನಿಯವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮತ್ತು ಕೇಂದ್ರ ಸರ್ಕಾರಕ್ಕೆ ಪತ್ರಗಳನ್ನು ಬರೆಯುವ ಮೂಲಕ ಉದ್ಧವ್‌ ಅವರು ಕೋವಿಡ್‌ ಬಿಕ್ಕಟ್ಟನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಒತ್ತಾಯಿಸಿದ್ದಾರೆ ಎಂದು ತಿಳಿಸಿದರು.

ಒಂದು ತಿಂಗಳಿನಿಂದಲೂ ಮುಖ್ಯಮಂತ್ರಿ ಈ ಒತ್ತಾಯ ಮಾಡುತ್ತಿದ್ದಾರೆ. ಸುಪ್ರೀಂಕೋರ್ಟ್‌ ಕೂಡ ಈ ಬಗ್ಗೆ ಗಮನ ಹರಿಸಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT