ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವನ್ನು ಸಂರಕ್ಷಿತ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಅಲಹಾಬಾದ್ ಹೈಕೋರ್ಟ್

ಅರ್ಜಿಯೊಂದರ ವಿಚಾರಣೆ ವೇಳೆ ಕೇಂದ್ರಕ್ಕೆ ಸಲಹೆ ನೀಡಿದ ನ್ಯಾಯಮೂರ್ತಿ ಶಮೀಮ್ ಅಹ್ಮದ್
Last Updated 5 ಮಾರ್ಚ್ 2023, 4:45 IST
ಅಕ್ಷರ ಗಾತ್ರ

ಲಖನೌ: ಗೋಹತ್ಯೆ ನಿಷೇಧಿಸಲು ಮತ್ತು ಅದನ್ನು 'ಸಂರಕ್ಷಿತ ರಾಷ್ಟ್ರೀಯ ಪ್ರಾಣಿ' ಎಂದು ಘೋಷಿಸಲು ಕೇಂದ್ರ ಸರ್ಕಾರವು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠ ಹೇಳಿದೆ.

‘ನಮ್ಮದು ಜಾತ್ಯತೀತ ದೇಶ. ಎಲ್ಲಾ ಧರ್ಮಗಳನ್ನು ಗೌರವಿಸಬೇಕು. ಹಿಂದೂ ಧರ್ಮದಲ್ಲಿ, ಗೋವು ದೈವಿಕ ಸ್ಥಾನ ಹೊಂದಿದೆ. ಅಲ್ಲದೇ ಪರೋಪಕಾರದ ಪ್ರಾಣಿಯಾಗಿದೆ. ಹಸುವಿಗೂ ದೇವತೆಗಳಿಗೂ ನಿಕಟವಾದ ಸಂಬಂಧವಿದೆ. ಅದರ ನಾಲ್ಕು ಕಾಲುಗಳು ನಾಲ್ಕು ವೇದಗಳನ್ನು ಸೂಚಿಸುತ್ತದೆ. ಆದ್ದರಿಂದ, ಅದನ್ನು ರಕ್ಷಿಸಬೇಕು ಮತ್ತು ಪೂಜಿಸಬೇಕು’ ಎಂದು ನ್ಯಾಯಮೂರ್ತಿ ಶಮೀಮ್ ಅಹ್ಮದ್ ಹೇಳಿದರು.

ಉತ್ತರ ಪ್ರದೇಶ ಗೋಹತ್ಯೆ ತಡೆ ಕಾಯ್ದೆ– 1955 ರ ಅಡಿಯಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಮನವಿಯನ್ನು ವಜಾಗೊಳಿಸುವ ವೇಳೆ ನ್ಯಾಯಮೂರ್ತಿ ಈ ಅಭಿಪ್ರಾಯ ವ್ಯಕ್ತಪಡಿಸಿದರು.

ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಪೊಲೀಸರು ತನ್ನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕೆಳಹಂತದ ನ್ಯಾಯಾಲಯದಲ್ಲಿ ತನ್ನ ವಿರುದ್ಧ ನಡೆಯುತ್ತಿರುವ ವಿಚಾರಣೆಯನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರಾದ ಮೊಹಮ್ಮದ್ ಅಬ್ದುಲ್ ಖಾಲಿಕ್ ಮನವಿ ಮಾಡಿದ್ದರು.

ಅರ್ಜಿಯನ್ನು ವಜಾಗೊಳಿಸಿದ ಪೀಠ, ದಾಖಲಾದ ವಾಸ್ತವಾಂಶಗಳ ಆಧಾರದ ಮೇಲೆ ಅರ್ಜಿದಾರರ ವಿರುದ್ಧ ಪ್ರಕರಣ ಹೂಡಲಾಗಿದೆ ಎಂದು ಹೇಳಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT