ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ತೃತೀಯ ಲಿಂಗಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

Last Updated 4 ಮಾರ್ಚ್ 2023, 3:15 IST
ಅಕ್ಷರ ಗಾತ್ರ

ನವದೆಹಲಿ: 50 ವರ್ಷ ವಯಸ್ಸಿನ ತೃತೀಯ ಲಿಂಗಿಯೊಬ್ಬರ ಶವ ದೆಹಲಿಯ ನಬಿ ಕರೀಂ ಪ್ರದೇಶದಲ್ಲಿರುವ ಅವರದೇ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಗಿಚಿ ಅಲ್ಲಾದಿನ್‌ ನಿವಾಸಿ ಲಿಚಿ ಎನ್ನುವವರು ನಾಪತ್ತೆಯಾಗಿರುವ ಬಗ್ಗೆ ಗುರುವಾರ ದೂರು ದಾಖಲಾಗಿತ್ತು.

ನಬಿ ಕರೀಂ ಪ್ರದೇಶದ ಕೃಷ್ಣ ಬಸ್ತಿಯ ಬಬಿತಾ ಕಿನ್ನರ್‌ ಎಂಬಾಕೆ ದೂರು ದಾಖಲಿಸಿದ್ದು, ಲಿಚಿ ಮಂಗಳವಾರದಿಂದಲೂ ಕಾಣೆಯಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಲಿಚಿ ಅವರ ಮನೆಯಿಂದ ದುರ್ವಾಸನೆ ಬರುತ್ತಿದೆ ಎಂದು ಶುಕ್ರವಾರ ಮಧ್ಯಾಹ್ನ 3ರ ವೇಲೆಗೆ ಬಬಿತಾ ಅವರೇ ಪೊಲೀಸರಿಗೆ ತಿಳಿಸಿದ್ದರು. ಅದರಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಬಾಗಿಲು ಮುರಿದು ಒಳಗೆ ಪ್ರವೇಶಿಸಿದರು. ಆಗ ಲಿಚಿ ಅವರ ಶವ ಹಾಸಿಗೆಯ ಮೇಲೆಯೇ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಶವದ ಮೇಲೆ ಯಾವುದೇ ಗಾಯದ ಗುರುತು ಕಂಡುಬಂದಿಲ್ಲ. ಉಸಿರುಗಟ್ಟಿ ಮೃತಪಟ್ಟಿರುವ ಸಾಧ್ಯತೆ ಇದೆ. ಮರಣೋತ್ತರ ಪರೀಕ್ಷೆ ವರದಿ ಬಳಿಕ ನಿಖರ ಕಾರಣ ತಿಳಿಯಲಿದೆ. ಸದ್ಯ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದೂ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT