ಮಂಗಳವಾರ, ಡಿಸೆಂಬರ್ 7, 2021
27 °C

ಪ್ರತಿ ತಿಂಗಳ 30 ರಂದು ಹಾಥರಸ್‌ ಸಂತ್ರಸ್ತೆಯ ದಿನ ಆಚರಣೆ: ಅಖಿಲೇಶ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಪ್ರತಿ ತಿಂಗಳ 30ರಂದು ಹಾಥರಸ್‌ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಸ್ಮರಣೆಯ ದಿನವಾಗಿ ಆಚರಿಸಬೇಕು. ಈ ಮೂಲಕ ಬಿಜೆಪಿಯ ದಲಿತ ಹಾಗೂ ಮಹಿಳಾ ವಿರೋಧಿ ನಿಲುವನ್ನು ಬಹಿರಂಗಪಡಿಸಬೇಕು ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌ ಗುರುವಾರ ಹೇಳಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ 14ರಂದು ಹಾಥರಸ್‌ನ ಗ್ರಾಮವೊಂದರಲ್ಲಿ 19 ವರ್ಷದ ಮಹಿಳೆಯೊಬ್ಬರು ನಾಲ್ವರು ಪುರುಷರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ದೆಹಲಿಯ ಸಫ್ದರ್‌ಗಂಜ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹದಿನೈದು ದಿನಗಳ ನಂತರದಲ್ಲಿ ಮಹಿಳೆ ಕೊನೆಯುಸಿರೆಳೆದಿದ್ದರು.

ಪೊಲೀಸರು ಬಲವಂತವಾಗಿ ಮಹಿಳೆಯ ಮೃತದೇಹವನ್ನು ತೆಗೆದುಕೊಂಡು ಹೋಗಿ ಮಧ್ಯರಾತ್ರಿ ಅಂತ್ಯಕ್ರಿಯೆ ನಡೆಸಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆರೋಪಿಸಿದ್ದರು.

‘ಬಿಜೆಪಿ ರಾಜ್ಯದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆದ ಅಮಾನವೀಯ ಕೃತ್ಯ ನೆನಪಿಸಲು ಪ್ರತಿ ತಿಂಗಳ 30ನೇ ತಾರೀಖಿನಂದು ‘ಹಾಥರಸ್‌ ಸಂತ್ರಸ್ತೆಯ ಸ್ಮರಣ ದಿನ’ವಾಗಿ ಆಚರಿಸುವಂತೆ ಉತ್ತರ ಪ್ರದೇಶದ ನಿವಾಸಿಗಳು, ಎಸ್‌ಪಿ ಮತ್ತು ಅದರ ಮಿತ್ರ ಪಕ್ಷಗಳಲ್ಲಿ ಮನವಿ ಮಾಡುತ್ತೇನೆ’ ಎಂದು ಅಖಿಲೇಶ್‌ ಯಾದವ್‌ ಟ್ವೀಟ್‌ನಲ್ಲಿ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು