ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಯುಭಾರ ಕುಸಿತ: ಚೆನ್ನೈ, ಪುದುಚೆರಿಗೆ ‘ನಿವಾರ್‘ ಚಂಡಮಾರುತ

ಹವಾಮಾನ ಇಲಾಖೆ ಮುನ್ಸೂಚನೆ: ತಗ್ಗು ಪ್ರದೇಶದಲ್ಲಿರುವವರ ಸ್ಥಳಾಂತರ
Last Updated 24 ನವೆಂಬರ್ 2020, 7:01 IST
ಅಕ್ಷರ ಗಾತ್ರ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ನಾಳೆ (ನ.25ರಂದು) ತಮಿಳುನಾಡು ಮತ್ತು ಪುದುಚೆರಿಯ ಕರಾವಳಿ ‍ಪ್ರದೇಶದಲ್ಲಿ ‘ನಿವಾರ್‘ ಚಂಡಮಾರುತ ತೀವ್ರವಾಗಿ ಅಪ್ಪಳಿಸುವ ಸಾಧ್ಯತೆ ಎಂದು ಮಂಗಳವಾರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತ ತೀವ್ರವಾಗಿ ಅಪ್ಪಳಿಸುವ ಪರಿಣಾಮ ತಮಿಳುನಾಡು ಮತ್ತು ಪುದುಚೆರಿ, ಕರೈಕಲ್‌ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

‘ಮುಂಜಾಗ್ರತಾ ಕ್ರಮವಾಗಿ ಚೆಂಬರಂಬಕ್ಕಂ ಸೇರಿದಂತೆ ಇಲ್ಲಿನ ಜಲಾಶಯಗಳ ಪ್ರದೇಶಗಳಮೇಲೆ ನಿರಂತರವಾಗಿ ನಿಗಾವಹಿಸಲಾಗುತ್ತಿದ್ದು, ತಗ್ಗು ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ‘ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಿ ಚರ್ಚೆ: ತಮಿಳುನಾಡು ಮತ್ತು ಪುದುಚೆರಿಯ ಕರಾವಳಿ ಭಾಗಗಳಿಗೆ ‘ನಿವಾರ್‘ ಚಂಡಮಾರುತ ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಎರಡು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗ ಳೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಮೋದಿಯವರು, ‘ನಿವಾರ್ ಚಂಡಮಾರುತದ ಹಿನ್ನೆಲೆಯಲ್ಲಿ ತಮಿಳುನಾಡು ಮತ್ತು ಪುದುಚೆರಿಯಲ್ಲಿ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಮಾತನಾಡಿದ್ದೇನೆ. ಕೇಂದ್ರದಿಂದ ಸಾಧ್ಯವಾದಷ್ಟು ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದೇನೆ. ಪ್ರವಾಹಪೀಡಿತ ಪ್ರದೇಶಗಳಲ್ಲಿರುವ ಜನರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ‘ ಎಂದು ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT