ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಡಮಾನ್‌ನಲ್ಲಿ ತೀವ್ರಗೊಂಡ ವಾಯುಭಾರ ಕುಸಿತ: ಚಂಡಮಾರುತದ ಎಚ್ಚರಿಕೆ

Last Updated 21 ಮಾರ್ಚ್ 2022, 4:40 IST
ಅಕ್ಷರ ಗಾತ್ರ

‌ನವದೆಹಲಿ: ಉತ್ತರ ಅಂಡಮಾನ್‌ ಬಳಿಯ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಸೋಮವಾರ ಮತ್ತಷ್ಟು ತೀವ್ರತೆ ಪಡೆದಿದ್ದು, ಉತ್ತರ-ಈಶಾನ್ಯಕ್ಕೆ ಗಂಟೆಗೆ 12 ಕಿಲೋಮೀಟರ್ ವೇಗದಲ್ಲಿ ಚಲಿಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಅಂಡಮಾನ್ ದ್ವೀಪಗಳಲ್ಲಿನ ಪೋರ್ಟ್ ಬ್ಲೇರ್‌ನಿಂದ ಪೂರ್ವ-ಆಗ್ನೇಯಕ್ಕೆ ಸುಮಾರು 110 ಕಿಮೀ ದೂರದಲ್ಲಿರುವ ವಾಯುಭಾರ ಕುಸಿತವು ಸೋಮವಾರ ಸಂಜೆ ವೇಳೆಗೆ ಚಂಡಮಾರುತವಾಗಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಅದು ಹೇಳಿದೆ.

‘ಮುಂದಿನ 48 ಗಂಟೆಗಳಲ್ಲಿ ಅಂಡಮಾನ್ ದ್ವೀಪಗಳ ಮೂಲಕ ಮ್ಯಾನ್ಮಾರ್ ಕರಾವಳಿಯ ಕಡೆಗೆ ಇದು ಉತ್ತರಕ್ಕೆ ಚಲಿಸುವ ಸಾಧ್ಯತೆ ಇದೆ’ಎಂದು ಇಲಾಖೆಯು ಬೆಳಿಗ್ಗೆ 8:45 ಕ್ಕೆ ಹೊರಡಿಸಿದ ರಾಷ್ಟ್ರೀಯ ಬುಲೆಟಿನ್‌ನಲ್ಲಿ ತಿಳಿಸಿದೆ.

ಸಮುದ್ರದ ಪರಿಸ್ಥಿತಿ ತುಂಬಾ ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ಮುಂದಿನ ಎರಡು ದಿನಗಳವರೆಗೆ ಎಲ್ಲಾ ಪ್ರವಾಸೋದ್ಯಮ ಮತ್ತು ಮೀನುಗಾರಿಕೆ ಚಟುವಟಿಕೆಗಳನ್ನು ಸ್ಥಗಿತಗೊಳಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

ಮೀನುಗಾರರಿಗೆ ಆಗ್ನೇಯ ಸಮುದ್ರದ ಕಡೆಗೆ ಹೋಗದಂತೆ ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT