ಶುಕ್ರವಾರ, ನವೆಂಬರ್ 27, 2020
24 °C

ಡ್ರಗ್ಸ್‌ ಪ್ರಕರಣ: ದೀಪಿಕಾ ಪಡುಕೋಣೆ ವ್ಯವಸ್ಥಾಪಕಿ ಕರಿಷ್ಮಾ ವಿಚಾರಣೆಗೆ ಹಾಜರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಅವರ ಉದ್ಯಮ ವ್ಯವಸ್ಥಾಪಕಿ ಕರಿಷ್ಮಾ ಪ್ರಕಾಶ್‌ ಮಾದಕ ವಸ್ತುಗಳ ನಿಯಂತ್ರಣ ದಳದ (ಎನ್‌ಸಿಬಿ) ಅಧಿಕಾರಿಗಳು ಎದುರು ಬುಧವಾರ ವಿಚಾರಣೆಗೆ ಹಾಜರಾದರು.

ಕಳೆದ ಅಕ್ಟೋಬರ್‌ ತಿಂಗಳಲ್ಲಿ ಕರಿಷ್ಮಾ ಪ್ರಕಾಶ್‌ ಮನೆಯಲ್ಲಿ ಅಧಿಕಾರಿಗಳು ಹುಡುಕಾಟ ನಡೆಸಿದ ಸಂದರ್ಭದಲ್ಲಿ 1.7ಗ್ರಾಂ ಹಶೀಶ್‌ ಪತ್ತೆಯಾಗಿತ್ತು.

ಈ ಹಿನ್ನೆಲೆಯಲ್ಲಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಹಲವು ಸಲ ಸಮನ್ಸ್ ನೀಡಲಾಗಿತ್ತು. ಅವರ ಹೇಳಿಕೆಯನ್ನು ದಾಖಲಿಸಲು ಎನ್‌ಸಿಬಿ ಅನೇಕ ಬಾರಿ ಅವರಿಗೆ ಸಮನ್ಸ್‌ ಕಳುಹಿಸಿದ್ದರೂ ಅವರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ ಎಂದು ಎನ್‌ಸಿಬಿ ಮಂಗಳವಾರ ಆರೋಪ ಮಾಡಿತ್ತು. ಇದರ ಬೆನ್ನಲ್ಲೇ ಕರಿಷ್ಮಾ ಪ್ರಕಾಶ್‌ ಬುಧವಾರ ಎನ್‌ಸಿಬಿ ಕಚೇರಿಗೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಿಷ್ಮಾ ಪ್ರಕಾಶ್‌ ನಿರೀಕ್ಷಣಾ ಜಾಮೀನಿಗೂ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ನವೆಂಬರ್‌ 7ರವರೆಗೂ ಅವರನ್ನು ಬಂಧಿಸಿದಿರುವಂತೆ ಸೂಚಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು