ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಮಿ ನಗರದಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಬಗ್ಗೆ ತೀವ್ರ ಕಾಳಜಿ ಇದೆ: ಬಾಗ್ಚಿ

Last Updated 5 ಮಾರ್ಚ್ 2022, 14:33 IST
ಅಕ್ಷರ ಗಾತ್ರ

ನವದೆಹಲಿ: ಪೂರ್ವ ಉಕ್ರೇನ್‌ನ ಸುಮಿ ನಗರದಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಭಾರತ, ರಷ್ಯಾ ಮತ್ತು ಉಕ್ರೇನ್‌ ದೇಶಗಳೆರಡು ಸಂಘರ್ಷದ ಪ್ರದೇಶದಿಂದ ಸುರಕ್ಷಿತವಾಗಿ ಹಿಂತಿರುಗಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಬಲವಾಗಿ ಒತ್ತಾಯಿಸಿದೆ.

'ವಿದ್ಯಾರ್ಥಿಗಳು ಸುರಕ್ಷತೆಯಿಂದಿರಲು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು, ಅನಗತ್ಯ ಅಪಾಯಗಳನ್ನು ತಪ್ಪಿಸಲು ಶೆಲ್ಟರ್‌ಗಳಲ್ಲಿಯೇ ಉಳಿಯಬೇಕು ಎಂದು ಸಲಹೆ ನೀಡಲಾಗಿದೆ' ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.

ಸುಮಾರು 700 ಭಾರತೀಯರು ಸುಮಿ ನಗರದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅವರು ಶುಕ್ರವಾರ ತಿಳಿಸಿದ್ದರು.

'ಉಕ್ರೇನ್‌ನ ಸುಮಿ ನಗರದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಬಗ್ಗೆ ನಾವು ತೀವ್ರ ಕಾಳಜಿ ಹೊಂದಿದ್ದೇವೆ. ನಮ್ಮ ವಿದ್ಯಾರ್ಥಿಗಳಿಗೆ ಸುರಕ್ಷಿತ ಕಾರಿಡಾರ್ ನಿರ್ಮಿಸಲು ರಷ್ಯಾ ಮತ್ತು ಉಕ್ರೇನ್ ಸರ್ಕಾರಗಳನ್ನು ಬಲವಾಗಿ ಒತ್ತಾಯಿಸಿದ್ದೇವೆ' ಎಂದು ಬಾಗ್ಚಿ ಶನಿವಾರ ಟ್ವೀಟ್‌ ಮಾಡಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತದ ರಾಯಭಾರ ಕಚೇರಿ ಸುಮಿಯಲ್ಲಿ ಸಿಲುಕಿರುವ ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT