ಶುಕ್ರವಾರ, ನವೆಂಬರ್ 27, 2020
18 °C

ಮಾನನಷ್ಟ ಮೊಕದ್ದಮೆ ಪ್ರಕರಣ: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಖುಲಾಸೆ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಬಿಜೆಪಿ ಸಂಸದ ರಮೇಶ್ ಬಿಧೂರಿ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬುಧವಾರ ಖುಲಾಸೆಗೊಳಿಸಿದೆ.

2017ರ ಜುಲೈನಲ್ಲಿ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮನ್ನು ಅಪರಾಧಿ ಎಂದು ಕರೆಯುವ ಮೂಲಕ ಕೇಜ್ರಿವಾಲ್‌ ಮಾನನಷ್ಟ ಹೇಳಿಕೆ ನೀಡಿದ್ದಾರೆ ಎಂದು ಬಿಧೂರಿ ಆರೋಪಿಸಿದ್ದರು.

ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಬಿಧೂರಿ ಐಪಿಸಿ ಸೆಕ್ಷನ್ 500 ಅಡಿಯಲ್ಲಿ ದೂರು ದಾಖಲಿಸಿದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು