ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಧಿ ಸಲಹೆ ಮೇರೆಗೆ ಸಾವರ್ಕರ್‌ ಕ್ಷಮಾಪಣೆ ಪತ್ರ ಬರೆದಿದ್ದರು: ರಾಜನಾಥ್‌ ಸಿಂಗ್

Last Updated 13 ಅಕ್ಟೋಬರ್ 2021, 2:23 IST
ಅಕ್ಷರ ಗಾತ್ರ

ನವದೆಹಲಿ: ಮಹಾತ್ಮ ಗಾಂಧಿ ಅವರ ಸಲಹೆ ಮೇರೆಗೆ ವಿ.ಡಿ. ಸಾವರ್ಕರ್‌ ಬ್ರಿಟಿಷರಿಗೆ ಕ್ಷಮಾಪಣೆ ಪತ್ರಗಳನ್ನು ಬರೆದಿದ್ದರು ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.

ನವದೆಹಲಿಯ ಅಂಬೇಡ್ಕರ್‌ ಇಂಟರ್‌ನ್ಯಾಷನಲ್‌ ಸೆಂಟರ್‌ನಲ್ಲಿ ಮಂಗಳವಾರ ನಡೆದ ಸಾವರ್ಕರ್‌ ಕುರಿತಾದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ರಾಜನಾಥ್‌ ಸಿಂಗ್‌ ಮಾತನಾಡಿದರು.

ಸಾವರ್ಕರ್‌ ಅವರು ಬ್ರಿಟಿಷ್‌ ಸರ್ಕಾರಕ್ಕೆ ಕ್ಷಮಾಪಣೆ ಪತ್ರಗಳನ್ನು ಬರೆದ ಬಗ್ಗೆ ಸುಳ್ಳುಗಳನ್ನು ಪ್ರಚಾರ ಮಾಡುವ ಮೂಲಕ ದಾರಿ ತಪ್ಪಿಸುತ್ತಿದ್ದಾರೆ. ಹೀಗೆ ದಾರಿ ತಪ್ಪಿಸುತ್ತಿರುವವರಿಗೆ ಕ್ಷಮಾಪಣೆ ಪತ್ರಗಳನ್ನು ಬರೆಯಲು ಸಲಹೆ ನೀಡಿದ್ದು ಮಹಾತ್ಮ ಗಾಂಧಿ ಎಂಬುದು ಗೊತ್ತಿಲ್ಲ ಎಂದು ರಾಜನಾಥ್‌ ಸಿಂಗ್‌ ಹೇಳಿದರು.

ಸಾವರ್ಕರ್‌ ವಿರುದ್ಧ ಸಾಕಷ್ಟು ಅಪಪ್ರಚಾರ ನಡೆದಿದೆ. ಬ್ರಿಟಿಷ್‌ ಸರ್ಕಾರಕ್ಕೆ ಕ್ಷಮಾಪಣೆ ಪತ್ರವನ್ನು ಬರೆದರು ಎಂಬುದನ್ನು ಸಾಕಷ್ಟು ಸಲ ಹೇಳಲಾಗಿದೆ. ಸತ್ಯ ಏನೆಂದರೆ ಸಾವರ್ಕರ್‌ ಬಿಡುಗಡೆ ಬಯಸಿ ಕ್ಷಮಾಪಣೆ ಪತ್ರಗಳನ್ನು ಬರೆಯಲಿಲ್ಲ. ಸಾಮಾನ್ಯವಾಗಿ ಒಬ್ಬ ಕೈದಿಗೆ ಕ್ಷಮಾಪಣೆ ಪತ್ರ ಬರೆಯುವ ಹಕ್ಕು ಇದೆ. ಮಹಾತ್ಮ ಗಾಂಧಿ ಅವರು ಕ್ಷಮಾಪಣೆ ಪತ್ರ ಬರೆಯುವಂತೆ ಸಾವರ್ಕರ್‌ ಅವರಿಗೆ ಸೂಚಿಸಿದರು. ನಂತರ ಸಾವರ್ಕರ್‌ ಅವರನ್ನು ಬಿಡುಗಡೆ ಮಾಡುವಂತೆ ಗಾಂಧಿ ಮನವಿ ಮಾಡಿದ್ದರು. ಸ್ವಾತಂತ್ರ್ಯ ಚಳುವಳಿಯನ್ನು ಶಾಂತಿಯುತವಾಗಿ ನಡೆಸಬೇಕು ಎಂದು ಗಾಂಧಿ ಹೇಳಿದ್ದರು. ಅದರಂತೆ ಸಾವರ್ಕರ್‌ ನಡೆದುಕೊಂಡರು ಎಂದು ರಾಜನಾಥ್‌ ಸಿಂಗ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT