ಮಂಗಳವಾರ, ಸೆಪ್ಟೆಂಬರ್ 27, 2022
27 °C

ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜಮ್ಮುವಿಗೆ ರಾಜನಾಥ್ ಸಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾರ್ಗಿಲ್‌ ವಿಜಯ ದಿವಸದ ಪ್ರಯುಕ್ತ ನಡೆಯಲಿರುವ ಸಮಾರಂಭದಲ್ಲಿ ಭಾಗವಹಿಸಲು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಇಂದು ಭೇಟಿ ನೀಡಲಿದ್ದಾರೆ.

'ಕಾರ್ಗಿಲ್ ವಿಜಯ ದಿವಸದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಾಳೆ, ಜುಲೈ 24ರಂದು ಜಮ್ಮುವಿಗೆ ಭೇಟಿ ನೀಡಲಿದ್ದೇನೆ' ಎಂದು ಅವರು ಶನಿವಾರ ಟ್ವೀಟ್ ಮಾಡಿದ್ದರು.

ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರೊಂದಿಗೆ ಆಗಮಿಸಲಿರುವ ಸಿಂಗ್, ಜಮ್ಮು ವಿಶ್ವವಿದ್ಯಾಲಯದ ಬಳಿ ಇರುವ ಗುಲ್ಶಾನ್‌ ಮೈದಾನದಲ್ಲಿ ನಡೆಯುವ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

1999ರ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಗೆಲುವು ಸಾಧಿಸಿದ ನೆನಪಿಗಾಗಿ ಪ್ರತಿ ವರ್ಷ ಜುಲೈ 26ರಂದು ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಗುತ್ತದೆ.

ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ನಡೆಯುವ ಮೂರು ದಿನಗಳ ಸಮಾರಂಭಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಹಲವು ಕಾರ್ಯಕ್ರಮಗಳು ನಡೆಯಲಿದ್ದು, ಸೇನೆ, ನಾಗರಿಕ ಆಡಳಿತದ ಗಣ್ಯರು, ಶೌರ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ಅವರ ಕುಟುಂಬದವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಭಾರತೀಯ ಸೇನೆಯೂ ಸಿದ್ಧತೆ ನಡೆಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು