ಸೋಮವಾರ, ಮೇ 10, 2021
19 °C
ರಕ್ಷಣಾ ಸಚಿವಾಲಯದಿಂದ ಪ್ರಕ್ರಿಯೆ ಆರಂಭ

ಜರ್ಮನಿಯಿಂದ 23 ಆಮ್ಲಜನಕ ಘಟಕಗಳ ಸಾಗಣೆಗೆ ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜರ್ಮನಿಯಿಂದ 23 ಮೊಬೈಲ್‌ ಆಮ್ಲಜನಕ ಉತ್ಪಾದನಾ ಘಟಕಗಳನ್ನು ವಿಮಾನಗಳ ಮೂಲಕ ಸಾಗಿಸಲು ರಕ್ಷಣಾ ಸಚಿವಾಲಯವು ಸಿದ್ಧತೆಗಳನ್ನು ಕೈಗೊಳ್ಳುತ್ತಿದೆ.

ಪ್ರತಿಯೊಂದು ಘಟಕವು ಪ್ರತಿ ನಿಮಿಷಕ್ಕೆ 40 ಲೀಟರ್‌ಗಳಷ್ಟು ಆಮ್ಲಜನಕ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಅಂದರೆ ಪ್ರತಿ ಗಂಟೆಗೆ 2,400 ಲೀಟರ್‌ಗಳಷ್ಟು ಆಮ್ಲಜನಕ ಉತ್ಪಾದನೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್‌–19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಶಸ್ತ್ರಾಸ್ತ್ರ ಪಡೆಗಳ ವೈದ್ಯಕೀಯ ಸೇವೆ (ಎಎಫ್‌ಎಂಎಸ್‌) ಆಸ್ಪತ್ರೆಗಳಲ್ಲಿ ಈ ಘಟಕಗಳನ್ನು ಸ್ಥಾಪಿಸಲಾಗುವುದು. ಒಂದು ವಾರದಲ್ಲಿ ವಿಮಾನಗಳ ಮೂಲಕ ಈ ಮೊಬೈಲ್‌ ಘಟಕಗಳು ಬರಲಿವೆ ಎಂದು ರಕ್ಷಣಾ ಸಚಿವಾಲಯದ ಪ್ರಧಾನ ವಕ್ತಾರ ಭರತ್‌ ಭೂಷಣ್ ಬಾಬು ತಿಳಿಸಿದ್ದಾರೆ.

ಈ ಘಟಕಗಳನ್ನು ಸುಲಭವಾಗಿ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಕೊಂಡೊಯ್ಯಬಹುದಾಗಿದೆ. ಇದೇ ಈ ಘಟಕಗಳ ವಿಶೇಷ ಮುಂದಿನ ದಿನಗಳಲ್ಲಿ ವಿದೇಶದಿಂದ ಇನ್ನೂ ಹೆಚ್ಚಿನ ಘಟಕಗಳನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಭಾರತಿಯ ವಾಯು ಪಡೆಗೆ ಸರಕು ಸಾಗಿಸುವ ವಿಮಾನಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ. ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿದ ಬಳಿಕ ಆಮ್ಲಜನಕ ಘಟಕಗಳನ್ನು ತರಲಾಗುವುದು ಎಂದು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು