ಗುರುವಾರ , ಅಕ್ಟೋಬರ್ 21, 2021
22 °C

ನ್ಯಾಯಾಲಯಗಳು ಪ್ರಕರಣಗಳನ್ನು ವಿಚಾರಣೆ ಮುಂದೂಡುತ್ತಿರುವುದಕ್ಕೆ ಸುಪ್ರೀಂ ಅಸಮಾಧಾನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ನ್ಯಾಯಾಲಯಗಳು ಪ್ರಕರಣಗಳ ವಿಚಾರಣೆಯನ್ನು ಮುಂದೂಡುತ್ತಿರುವುದರಿಂದ ಅನಗತ್ಯವಾಗಿ ತನಗೆ ಹೊರೆಯಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಕ್ರಿಮಿನಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಆರೋಪಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಎಸ್‌.ಕೆ. ಕೌಲ್‌ ಮತ್ತು ಎಂ.ಎಂ. ಸುಂದರೇಶ್‌ ಅವರನ್ನೊಳಗೊಂಡ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಆರೋಪಿಯು ಅಲಹಾಬಾದ್‌ ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಕಳೆದ ಏಳು ತಿಂಗಳಿಂದ ಬಾಕಿ ಉಳಿದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪೀಠವು, ‘ಹೈಕೋರ್ಟ್‌ ಈ ಬಗ್ಗೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ. ನಿರ್ಧಾರ ಕೈಗೊಳ್ಳದೆ ಕೇವಲ ಮುಂದೂಡುವುದರಿಂದ ಈ ನ್ಯಾಯಾಲಯದ ಮೇಲೆ ಹೊರೆ ಹೆಚ್ಚಾಗುತ್ತಿದೆ’ ಎಂದು ಹೇಳಿದೆ.

ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ ಪೀಠವು, ‘ತನಿಖೆಯ ಸಂದರ್ಭದಲ್ಲಿ ಅರ್ಜಿದಾರರನ್ನು ಬಂಧಿಸಿಲ್ಲ. ತನಿಖೆಗೆ ಆರೋಪಿ ಸಹಕಾರ ನೀಡಿದ್ದಾರೆ. ಇಂತಹ ಸನ್ನಿವೇಶದಲ್ಲಿ ಆರೋಪಪಟ್ಟಿ ದಾಖಲಿಸಿದಾಗ ಅರ್ಜಿದಾರರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಅಗತ್ಯವಿಲ್ಲ’ ಎಂದು ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು