ಬುಧವಾರ, ಸೆಪ್ಟೆಂಬರ್ 23, 2020
27 °C
ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಒತ್ತಾಯ

ಕೋವಿಡ್‌ ಲಸಿಕೆ ತಯಾರಿಕೆ, ವಿತರಣೆ ಬಗ್ಗೆ ಸ್ಪಷ್ಟ ಮಾಹಿತಿ ನೀಡಲು ರಾಹುಲ್‌ ಆಗ್ರಹ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೊರೊನಾ ವೈರಸ್‌ಗೆ ಲಸಿಕೆ ಅಭಿವೃದ್ಧಿಪಡಿಸುತ್ತಿರುವ ರಾಷ್ಟ್ರಗಳಲ್ಲಿ ಭಾರತವೂ ಒಂದಾಗಿದ್ದು, ಈ ಸಮಾಜದ ಎಲ್ಲರಿಗೂ ಮುಕ್ತವಾಗಿ ಮತ್ತು ಕಡಿಮೆ ಬೆಲೆಗೆ ಲಸಿಕೆ ದೊರೆಯುವಂತೆ ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಭಾರತ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳಲ್ಲಿ ಈ ಕುರಿತು ಲಸಿಕೆ ತಯಾರಿಕೆಯ ಜತೆಗೆ, ಮನುಷ್ಯರ ಮೇಲೆ ಪ್ರಯೋಗ ನಡೆಸುವಂತಹ ಪ್ರಕ್ರಿಯೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ, ‘ಸಮಾಜದ ಎಲ್ಲ ವರ್ಗದವರಿಗೂ, ಕೈಗೆಟುವ ಬೆಲೆಯಲ್ಲಿ ಲಸಿಕೆ ಲಭ್ಯತೆ ಮತ್ತು  ಪ್ರಾಮಾಣಿಕವಾಗಿ ಲಸಿಕೆ ತಲುಪಿಸಲು ಯಾವ ಕ್ರಮ ಕೈಗೊಂಡಿದೆ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಕೇಳಿದ್ದಾರೆ.

‘ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ಸಮಾಜದ ಪ್ರತಿಯೊಬ್ಬರಿಗೂ ಕೋವಿಡ್‌ ಲಸಿಕೆ ಕೈಗೆಟುಕುವಂತೆ ಆಗಬೇಕು ಎನ್ನುವುದು ನನ್ನ ಆಶಯವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರ, ಆ ಕ್ರಮಗಳನ್ನು ಅನುಸರಿಸುತ್ತಿದೆಯೇ’ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು