ಭಾನುವಾರ, ಮೇ 22, 2022
25 °C

ದೆಹಲಿಯಲ್ಲಿ 11,486, ಮುಂಬೈನಲ್ಲಿ 3,568 ಕೋವಿಡ್ ಪ್ರಕರಣ ದೃಢ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಶನಿವಾರ ಸಂಜೆಯ ವೇಳೆಗೆ ಕೊನೆಗೊಂಡಂತೆ ಕಳೆದ 24 ತಾಸಿನಲ್ಲಿ 11,486 ಕೋವಿಡ್ ಪ್ರಕರಣಗಳು ವರದಿಯಾಗಿವೆ.

ಇದೇ ಅವಧಿಯಲ್ಲಿ 45 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಕೋವಿಡ್ ಮೂರನೇ ಅಲೆ ಆರಂಭವಾದ ಬಳಿಕ ದೆಹಲಿಯಲ್ಲಿ ದಾಖಲಾದ ಗರಿಷ್ಠ ಸಾವಿನ ಪ್ರಕರಣ ಇದಾಗಿದೆ.

ಇದನ್ನೂ ಓದಿ: 

 

 

ಸಕ್ರಿಯ ಪ್ರಕರಣಗಳ ಸಂಖ್ಯೆ 58,593ಕ್ಕೆ ತಲುಪಿದೆ. 14,802 ಮಂದಿ ಗುಣಮುಖರಾಗಿದ್ದಾರೆ.

 

ಕೋವಿಡ್ ದೃಢ ಪ್ರಮಾಣವು ಶೇ 16.36 ಆಗಿದೆ.

ಮುಂಬೈನಲ್ಲಿ 3,568 ಕೋವಿಡ್ ಪ್ರಕರಣ ದೃಢ...
ವಾಣಿಜ್ಯ ನಗರಿ ಮುಂಬೈನಲ್ಲಿ 3,568 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಕಳೆದ 24 ತಾಸಿನಲ್ಲಿ 10 ಮಂದಿ ಮೃತಪಟ್ಟಿದ್ದು, 231 ಮಂದಿ ಗುಣಮುಖರಾಗಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 17,497ಕ್ಕೆ ತಲುಪಿದೆ.

 

 

 

ಮಹಾರಾಷ್ಟ್ರದಲ್ಲಿ ಹೊಸದಾಗಿ 46,393 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 48 ಮಂದಿ ಮೃತಪಟ್ಟಿದ್ದಾರೆ.

 

30,795 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,79,930ಕ್ಕೆ ತಲುಪಿದೆ.

ರಾಜ್ಯದಲ್ಲಿ ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್‌ ಸೋಂಕಿನ ಒಟ್ಟು 2,759 ಪ್ರಕರಣಗಳು ಪತ್ತೆಯಾಗಿವೆ. ಮುಂಬೈನಲ್ಲಿ ಓಮೈಕ್ರಾನ್ ಪ್ರಕರಣಗಳ ಸಂಖ್ಯೆ 1,009ಕ್ಕೆ ತಲುಪಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು