ಗುರುವಾರ , ಮೇ 19, 2022
21 °C

ದೆಹಲಿ: ಕಿರುತೆರೆ ನಟಿಯನ್ನು ಹಿಂಬಾಲಿಸಿದ ಆರೋಪದಡಿ ನಾಲ್ವರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೆಹಲಿಯ ರೋಹಿಣಿ ಪ್ರಾಂತ್ಯದಲ್ಲಿ ಕಿರುತೆರೆ ನಟಿಯೊಬ್ಬರ ಕಾರನ್ನು ಹಿಂಬಾಲಿಸಿ, ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನಾಲ್ವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದರು.

‘ಪ್ರಾಚಿ ಟೆಹ್ಲಾನ್‌ ಅವರು ಸೋಮವಾರ ಮಧ್ಯರಾತ್ರಿ ಪತಿಯೊಂದಿಗೆ ಮನೆಗೆ ತೆರಳುತ್ತಿದ್ದ ವೇಳೆ ಅವರ ಕಾರನ್ನು ಹಿಂಬಾಲಿಸಲಾಗಿದೆ. ಪ್ರಾಚಿ ಅವರು ಪ್ರಶಾಂತ್‌ ವಿಹಾರದಲ್ಲಿರುವ ತಮ್ಮ ನಿವಾಸಕ್ಕೆ ತಲುಪುತ್ತಿದ್ದಂತೆ ಕೆಲವು ಯುವಕರು ವಾಹನದಿಂದ ಇಳಿದು, ಪ್ರಾಚಿ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ’ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

‘ಈ ಸಂಬಂಧ ಪ್ರಾಚಿ ಅವರು ಮಂಗಳವಾರ ಬೆಳಿಗ್ಗೆ ದೂರು ಸಲ್ಲಿಸಿದ್ದಾರೆ. ದೂರಿನ ಆಧಾರದ ಮೇರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಘಟನೆ ನಡೆದ ಸಂದರ್ಭದಲ್ಲಿ ಆರೋಪಿಗಳು ಮದ್ಯಸೇವಿಸಿದ್ದರು’ ಎಂದು ಅವರು ಹೇಳಿದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು