ಸೋಮವಾರ, ಜುಲೈ 4, 2022
24 °C

ದೆಹಲಿಯಲ್ಲಿ 1,011 ಕೋವಿಡ್ ಪ್ರಕರಣಗಳು ದೃಢ, ಪಾಸಿಟಿವಿಟಿ ದರ ಶೇಕಡ 6.42ಕ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಸೋಮವಾರ ಹೊಸದಾಗಿ 1,011 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಒಬ್ಬ ಕೋವಿಡ್ ಸೋಂಕಿತ ಸಾವಿಗೀಡಾಗಿದ್ದು, ಪಾಸಿಟಿವಿಟಿ ದರ ಶೇಕಡ 6.42ಕ್ಕೆ ಏರಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆಯಿಂದ ತಿಳಿದುಬಂದಿದೆ.

ಈ ಮೂಲಕ ದೆಹಲಿಯಲ್ಲಿ ಸೋಂಕಿತರ ಒಟ್ಟು ಸಂಖ್ಯೆ 18,75,887ಕ್ಕೆ ಏರಿದ್ದು, ಮೃತಪಟ್ಟವರ ಒಟ್ಟು ಸಂಖ್ಯೆ 26,170ಕ್ಕೆ ಜಿಗಿದಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4,168ರಷ್ಟಿದೆ.

ರಾಜಧಾನಿಯಲ್ಲಿ 15,642 ಕೋವಿಡ್ ಟೆಸ್ಟ್ ಮಾಡಲಾಗಿದೆ.

ಭಾನುವಾರ 1,083 ಪ್ರಕರಣಗಳು ವರದಿಯಾಗಿದ್ದವು. ಪಾಸಿಟಿವಿಟಿ ದರ ಶೇಕಡ 4.48 ರಷ್ಟಿತ್ತು.

ಕಳೆದ ಮೂರ್ನಾಲ್ಕು ದಿನಗಳಿಂದ ದೆಹಲಿಯಲ್ಲಿ ಸಾವಿರಕ್ಕೂ ಅಧಿಕ ಕೋವಿಡ್ ಪ್ರಕರಣಗಳು ದಾಖಲಾಗುತ್ತಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು