ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಏಮ್ಸ್‌ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಯಾವುದೇ ಅಪಾಯ ಇಲ್ಲ

ಅಕ್ಷರ ಗಾತ್ರ

ನವದೆಹಲಿ: ಏಮ್ಸ್‌ನ 9ನೇ ಮಹಡಿಯಲ್ಲಿ ಬುಧವಾರ ರಾತ್ರಿ ಅಗ್ನಿ ಅನಾಹುತ ಸಂಭವಿಸಿದ್ದು, 22 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಕಟ್ಟಡದೊಳಗಿದ್ದ ಎಲ್ಲರನ್ನು ರಕ್ಷಿಸಲಾಗಿದೆ.

ಬುಧವಾರ ರಾತ್ರಿ 10.32ಕ್ಕೆ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದಾಗಿ ಕರೆ ಬಂತು. ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿದೆವು. ಕಟ್ಟಡದೊಳಗಿದ್ದ ಎಲ್ಲರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಗಿದೆ. ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಅಗ್ನಿ ಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ.

ಆಸ್ಪತ್ರೆಯ ಕನ್ವರ್ಜೆನ್ಸ್‌ ಬ್ಲಾಕ್‌ನಲ್ಲಿ, ಅಂದರೆ ರೋಗ ಪತ್ತೆ ಹಚ್ಚುವ ಪ್ರಯೋಗಾಲಯ ಮತ್ತು ಪರೀಕ್ಷಾ ವಿಭಾಗಗಳಿರುವ ಕೊಠಡಿಯಲ್ಲಿ ಅಗ್ನಿ ಆಕಸ್ಮಿಕ ಅವಘಡ ಸಂಭವಿಸಿದೆ. ಹೆಚ್ಚು ಮಂದಿ ಇರುವ ಜಾಗವಾಗಿದ್ದು, ಆತಂಕಕ್ಕೆ ಕಾರಣವಾಗಿತ್ತು ಎನ್ನಲಾಗಿದೆ.

9ನೇ ಮಹಡಿಯಲ್ಲಿದ್ದ ರೆಫ್ರಿಜರೇಟರ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಬೆಂಕಿಯನ್ನು ನಂದಿಸಿ, ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ ಎಂದು ದಿಲ್ಲಿ ಅಗ್ನಿಶಾಮಕ ಇಲಾಖೆ ತಿಳಿಸಿದೆ ಎಂದು 'ಎನ್‌ಡಿಟಿವಿ' ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT