ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ನ.27 ರಿಂದ ಸಿಎನ್‌ಜಿ, ಇ–ವಾಹನಗಳಿಗೆ ಮಾತ್ರ ನಗರ ಪ್ರವೇಶಕ್ಕೆ ಅವಕಾಶ

Last Updated 24 ನವೆಂಬರ್ 2021, 12:50 IST
ಅಕ್ಷರ ಗಾತ್ರ

ನವದೆಹಲಿ: ನವೆಂಬರ್ 27ರಿಂದ ಸಿಎನ್‌ಜಿ ಹಾಗೂ ಎಲೆಕ್ಟ್ರಿಕ್ ವಾಹನಗಳಿಗೆ ಮಾತ್ರ ನಗರದೊಳಗೆ ಪ್ರವೇಶಿಸಲು ಅನುಮತಿ ನೀಡಲಾಗುವುದು ಎಂದು ದೆಹಲಿ ಸರ್ಕಾರ ಬುಧವಾರ ಹೇಳಿದೆ.

ಉಳಿದ ವಾಹನಗಳ ಪ್ರವೇಶವನ್ನು ಡಿಸೆಂಬರ್ 3ರ ವರೆಗೆ ನಿಷೇಧಿಸಲಾಗುವುದು ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ತಿಳಿಸಿದ್ದಾರೆ.

ಇದರ ಜೊತೆಗೆ, ರಾಷ್ಟ್ರ ರಾಜಧಾನಿಯಲ್ಲಿ ಶಾಲಾ–ಕಾಲೇಜುಗಳು ಮತ್ತು ಎಲ್ಲಾ ಸರ್ಕಾರಿ ಕಚೇರಿಗಳು ನವೆಂಬರ್ 29 ರಂದು ಮತ್ತೆ ತೆರೆಯಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಾಲಿನ್ಯವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸರ್ಕಾರಿ ಸಿಬ್ಬಂದಿಗೆ ರೈ ಸೂಚಿಸಿದ್ದಾರೆ. ನೌಕರರಿಗಾಗಿ ವಿಶೇಷ ಬಸ್‌ಗಳನ್ನು ನಿಯೋಜಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.

ದೆಹಲಿಯಲ್ಲಿ ಶಾಲೆ, ಕಾಲೇಜು ಮತ್ತು ಇತರೆ ಶೈಕ್ಷಣಿಕ ಸಂಸ್ಥೆಗಳ ಭೌತಿಕ ತರಗತಿಗಳನ್ನು ಬಂದ್ ಮಾಡುವಂತೆ ವಾಯು ಗುಣಮಟ್ಟ ನಿರ್ವಹಣಾ ಸಮಿತಿ(ಸಿಎಕ್ಯುಎಂ) ನವೆಂಬರ್‌ 17ರಂದು ನಿರ್ದೇಶನ ನೀಡಿತ್ತು.

ಅಗತ್ಯ ಸೇವೆಗಳನ್ನು ಹೊರತುಪಡಿಸಿ ದೆಹಲಿಯ ಎಲ್ಲ ಸರ್ಕಾರಿ ಕಚೇರಿಗಳು, ಸ್ವಾಯತ್ತ ಸಂಸ್ಥೆಗಳ ನೌಕರರಿಗೆ ವರ್ಕ್ ಫ್ರಂ ಹೋಮ್ ನೀಡಲಾಗಿತ್ತು.

ವಾಯುಮಾಲಿನ್ಯ ತಡೆಯುವ ನಿಟ್ಟಿನಲ್ಲಿ ದೆಹಲಿ ಮತ್ತು ಎನ್‌ಸಿಆರ್ ವ್ಯಾಪ್ತಿಯ ರಾಜ್ಯಗ‌ಳಿಗೆ ನವೆಂಬರ್ 21ರವರೆಗೆ ಕಟ್ಟಡ ಕಾಮಗಾರಿ, ಕಟ್ಟಡ ತೆರವು ಕಾರ್ಯಾಚರಣೆಗಳನ್ನು ನಡೆಸದಂತೆ ಸಮಿತಿ ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT