ಗುರುವಾರ , ನವೆಂಬರ್ 26, 2020
21 °C

ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಕುಸಿತ: ಹವಾಮಾನ ಇಲಾಖೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ವಾಯುಗುಣಮಟ್ಟ ಕಳಪೆಯಾಗಿದ್ದು, ಇದು ಮುಂದಿನ 24 ಗಂಟೆಗಳಲ್ಲಿ ಸುಧಾರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಕಳೆದ ವರ್ಷ ನವೆಂಬರ್‌ ತಿಂಗಳಿಗೆ ಹೋಲಿಸಿದರೆ ಗುರುವಾರ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ತೀರಾ ಕಳಪೆಯಾ ಗಿತ್ತು. ಇದಕ್ಕೆ ಕೃಷಿ ತ್ಯಾಜ್ಯ ಸುಡುವಿಕೆಯಿಂದ ಉಂಟಾಗುವ ಮಾಲಿನ್ಯವೂ ಕಾರಣವಾಗಿದೆ. ಈ ವರ್ಷ ಗಾಳಿಯ ಗುಣಮಟ್ಟ ಕುಸಿಯಲು ಕೃಷಿ ತ್ಯಾಜ್ಯ ಸುಡುವಿಕೆಯ ಶೇ 42ರಷ್ಟು ಮಾಲಿನ್ಯವೂ ಸೇರಿಕೊಂಡಿದೆ.  

ಪ್ರತಿಕೂಲವಾದ ಹವಾಮಾನ - ಶಾಂತ ಗಾಳಿ ಮತ್ತು ಕಡಿಮೆ ತಾಪಮಾನ - ಮತ್ತು ನೆರೆಯ ರಾಜ್ಯಗಳಲ್ಲಿನ ಕೃಷಿ ತ್ಯಾಜ್ಯ ಸುಡುವಿಕೆಯಿಂದ ಉಂಟಾಗುವ ಹೊಗೆಯು ಗಾಳಿಯ ಗುಣಮಟ್ಟ ಕುಸಿಯುವಂತೆ ಮಾಡಿದೆ. ಈ ವರ್ಷ ಜನವರಿ ನಂತರ ಮೊದಲ ಬಾರಿಗೆ ದೆಹಲಿಯಲ್ಲಿ ವಾಯು ಗುಣಮಟ್ಟದ ಸೂಚ್ಯಂಕ ಇಷ್ಟು ಕುಸಿತ ಕಂಡಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು