ಬುಧವಾರ, ಜೂನ್ 16, 2021
28 °C

ದೆಹಲಿ ವಿಮಾನ ನಿಲ್ದಾಣ: ಕೊರೊನಾ ಸೋಂಕು ಪತ್ತೆ ಪರೀಕ್ಷಾ ಕೇಂದ್ರ ತೆರೆಯಲು ಚಿಂತನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೆಹಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೀಘ್ರದಲ್ಲೇ ಕೊರೊನಾ ಸೋಂಕು ತಪಾಸಣೆ ಕೇಂದ್ರ ಆರಂಭಿಸುವ ಸಾಧ್ಯತೆ ಇದೆ ಎಂದು ವಿಮಾನ ನಿಲ್ದಾಣದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಸೋಂಕು ಪತ್ತೆ ಪರೀಕ್ಷಾ ಕೇಂದ್ರ ಆರಂಭಿಸುವುದರಿಂದ, ವಿದೇಶಿ ಪ್ರಯಾಣಿಕರು ನಿಲ್ದಾಣದಲ್ಲೇ ಪರೀಕ್ಷೆಗೆ ಒಳಪಡಬಹುದು. ಒಂದೊಮ್ಮೆ ವರದಿ ನೆಗೆಟಿವ್ ಬಂದರೆ, ಏಳು ದಿನಗಳ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಬಹುದು. ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರ ತೆರೆಯುವ ಚಿಂತನೆ ನಡೆಸಲಾಗಿದೆ. ಪರೀಕ್ಷೆ ವರದಿ ಪಡೆಯಲು ಪ್ರಯಾಣಿಕರು ಎಂಟು ಗಂಟೆಗಳ ಕಾಲ ನಿಲ್ದಾಣದಲ್ಲೇ ಇರಬೇಕಾಗುತ್ತದೆ’ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಪ್ರಸ್ತುತ ಚಾಲ್ತಿಯಲ್ಲಿ ಇರುವ ಕೇಂದ್ರ ಆರೋಗ್ಯ ಸಚಿವಾಲಯದ ಮಾರ್ಗಸೂಚಿ ಪ್ರಕಾರ ವಿದೇಶದಿಂದ ಬಂದ ಪ್ರಯಾಣಿಕರು ಕಡ್ಡಾಯವಾಗಿ ಏಳು ದಿನಗಳ ಮನೆ ಕ್ವಾರಂಟೈನ್ ಜತೆಗೆ, ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್‌ಗೂ ಒಳಪಡಬೇಕಿದೆ.

 

 

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು