ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಜ್ರಿವಾಲ್‌ಗೆ ಬೆದರಿಕೆ ಒಡ್ಡಿದ ಆರೋಪ: ಬಿಜೆಪಿ ನಾಯಕ ತಜಿಂದರ್‌ ಬಗ್ಗಾ ಬಂಧನ

ಅಕ್ಷರ ಗಾತ್ರ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬೆದರಿಕೆ ಒಡ್ಡಿದ ಆರೋಪದ ಮೇಲೆ ಬಿಜೆಪಿ ನಾಯಕ ತಜಿಂದರ್‌ ಪಾಲ್ ಸಿಂಗ್ ಬಗ್ಗಾ ಅವರನ್ನು ಪಂಜಾಬ್ ಪೊಲೀಸರು ಶುಕ್ರವಾರ ಬೆಳಿಗ್ಗೆ ಬಂಧಿಸಿದ್ದಾರೆ.

ಮಾರ್ಚ್ 3ರಂದು ನಡೆದ ಪ್ರತಿಭಟನೆಯ ವೇಳೆ ತಜಿಂದರ್‌ ಸಿಂಗ್ ಅವರು ಅರವಿಂದ್ ಕೇಜ್ರಿವಾಲ್‌ಗೆ ಬೆದರಿಕೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ ತಜಿಂದರ್‌ ಮಾತನಾಡಿರುವ ಹೇಳಿಕೆ ಮತ್ತು ವಿಡಿಯೊ ಆಧರಿಸಿ ಪೊಲೀಸರು ಕ್ರಮ ಜರುಗಿಸಿದ್ದಾರೆ.

ತೆಜೀಂದರ್ ಸಿಂಗ್ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಸುಳ್ಳು ವದಂತಿಗಳನ್ನು ಹರಡಿದ್ದಾರೆ. ಜತೆಗೆ, ಧಾರ್ಮಿಕ ಮತ್ತು ಕೋಮು ದ್ವೇಷ ಸೃಷ್ಟಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ತಜಿಂದರ್‌ ವಿರುದ್ಧ ಎಎಪಿ ನಾಯಕ ಸನ್ನಿ ಸಿಂಗ್ ದೂರು ನೀಡಿದ್ದರು.

‘ಇಂದು ಬೆಳಿಗ್ಗೆ 8.30ರ ಸುಮಾರಿಗೆ 10 ಮಂದಿ ಪಂಜಾಬ್ ಪೊಲೀಸರು ನಮ್ಮ ಮನೆಗೆ ಬಂದಿದ್ದರು. ತಜಿಂದರ್‌ನನ್ನು ಬಂಧಿಸಿ ಕರೆದುಕೊಂಡು ಹೋಗಿದ್ದಾರೆ’ ಎಂದು ತಂದೆ ಕೃಪಾಲ್ ಸಿಂಗ್ ಬಗ್ಗಾ ಹೇಳಿಕೆ ನೀಡಿದ್ದಾರೆ.

ನಾನು ಘಟನೆ ಕುರಿತು ವಿಡಿಯೊ ಚಿತ್ರೀಕರಿಸಲು ಮುಂದಾದೆ. ಆದರೆ, ಪೊಲೀಸರು ನನ್ನ ಮೇಲೆ ಹಲ್ಲೆ ನಡೆಸಿ ಮೊಬೈಲ್ ಕಸಿದುಕೊಂಡರು ಕೃಪಾಲ್ ಸಿಂಗ್ ತಿಳಿಸಿದ್ದಾರೆ.

ತಜಿಂದರ್‌ ಬಂಧನಕ್ಕೆ ಬಿಜೆಪಿ ಖಂಡನೆ: ‘ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜಕೀಯ ವಿರೋಧಿಗಳನ್ನು ಬೆದರಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ಪಂಜಾಬ್‌ನಲ್ಲಿ ತಮ್ಮ ಪಕ್ಷದ ರಾಜಕೀಯ ಶಕ್ತಿಯನ್ನು ದುರುಪಯೋಗಪಡಿಸಿಕೊಳ್ಳಲು ಪ್ರಾರಂಭಿಸಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ಈ ಬಿಕ್ಕಟ್ಟಿನ ಸಮಯದಲ್ಲಿ ದೆಹಲಿಯ ಪ್ರತಿಯೊಬ್ಬ ಪ್ರಜೆಯೂ ತಾಜಿಂದರ್‌ ಪಾಲ್ ಸಿಂಗ್ ಬಗ್ಗಾ ಅವರ ಕುಟುಂಬದೊಂದಿಗೆ ನಿಂತಿದ್ದಾರೆ’ ಎಂದು ದೆಹಲಿ ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್ ಹೇಳಿದ್ದಾರೆ.

‘ಪಂಜಾಬ್ ಪೊಲೀಸರು ತಜಿಂದರ್‌ ಬಗ್ಗಾ ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆ. ಕೇಜ್ರಿವಾಲ್ ಅವರಿಂದ ಬೆದರಿಸಲು ಅಥವಾ ದುರ್ಬಲಗೊಳಿಸಲು ಸಾಧ್ಯವಿಲ್ಲ. ಸರ್ದಾರ್‌ ಬಗ್ಗೆ ಏಕಿಷ್ಟು ಭಯ’ ಎಂದು ಬಿಜೆಪಿ ನಾಯಕ ಕಪಿಲ್ ಮಿಶ್ರಾ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT