ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಎಪಿ ಸರ್ಕಾರ ವಜಾಕ್ಕೆ ಒತ್ತಾಯಿಸಿ ರಾಷ್ಟ್ರಪತಿ ಭೇಟಿಯಾಗಲಿರುವ ಬಿಜೆಪಿ ಶಾಸಕರು

Last Updated 6 ಸೆಪ್ಟೆಂಬರ್ 2022, 2:19 IST
ಅಕ್ಷರ ಗಾತ್ರ

ನವದೆಹಲಿ: ಸಚಿವರ ವಿರುದ್ಧದ ಭ್ರಷ್ಟಾಚಾರ ಆರೋಪಗಳು ಹಾಗೂ ಇತರ ಹಲವಾರು ವಿಷಯಗಳಿಗೆ ಸಂಬಂಧಿಸಿ ಎಎಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ದೆಹಲಿ ಬಿಜೆಪಿ ಶಾಸಕರು ಆಗ್ರಹಿಸಿದ್ದಾರೆ.

ಈ ವಿಚಾರವಾಗಿ, ಮಂಗಳವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿರುವ ಶಾಸಕರು, ಮನವಿ ಪತ್ರ ಸಲ್ಲಿಸಲಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ವಿರುದ್ಧ ಎಎಪಿ ನಿಂದನಾತ್ಮಕ ಭಾಷೆ ಬಳಸಿ ಟೀಕಿಸಿದೆ ಎಂದು ದೆಹಲಿ ವಿಧಾನಸಭೆ ಪ್ರತಿಪಕ್ಷ ನಾಯಕ ರಾಮ್‌ವೀರ್ ಸಿಂಗ್ ಬಿಧುರಿ ಆರೋಪಿಸಿದ್ದಾರೆ.

‘ಲೆಫ್ಟಿನೆಂಟ್ ಗವರ್ನರ್ ವಿರುದ್ಧ ನಿಂದನೆಯ ಭಾಷೆ ಬಳಸಲಾಗಿದೆ. ಅವರಿಗೆ ಕಳುಹಿಸಿದ ಕಡತಗಳಿಗೆ ಮುಖ್ಯಮಂತ್ರಿಯೂ ಸಹಿ ಹಾಕಿಲ್ಲ. ಸಂಪುಟ ಸಭೆಯ ನಂತರ ಅವರಿಗೆ ಸಂಪುಟ ಟಿಪ್ಪಣಿಗಳನ್ನು ಕಳುಹಿಸಲಾಗುತ್ತಿದೆ. ಈ ಎಲ್ಲ ಕಾನೂನುಬಾಹಿರ ಚಟುವಟಿಕೆಗಳನ್ನು ಪರಿಗಣಿಸಿ ಸರ್ಕಾರವನ್ನು ತಕ್ಷಣವೇ ವಜಾಗೊಳಿಸಬೇಕು’ ಎಂದು ಅವರು ಹೇಳಿದ್ದಾರೆ.

ಭ್ರಷ್ಟಾಚಾರ ಆರೋಪದಲ್ಲಿ ಸಚಿವ ಸತ್ಯೇಂದರ್ ಜೈನ್ ಹಾಗೂ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ವಜಾಗೊಳಿಸಬೇಕು ಎಂದು ಬಿಜೆಪಿ ಕಳೆದ ಕೆಲವು ದಿನಗಳಿಂದ ಆಗ್ರಹಿಸುತ್ತಿದೆ.

ಈ ಮಧ್ಯೆ, ತಮ್ಮ ಶಾಸಕರನ್ನು ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ಎಎಪಿ ನಾಯಕರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT