ಗುರುವಾರ , ಮಾರ್ಚ್ 23, 2023
30 °C

ದೆಹಲಿಗೆ ತೆರಳುತ್ತಿದ್ದ ಆಂಧ್ರ ಪ್ರದೇಶದ ಸಿಎಂ ಜಗನ್ ವಿಮಾನ ತುರ್ತು ಭೂಸ್ಪರ್ಶ

ಪಿಟಿಐ Updated:

ಅಕ್ಷರ ಗಾತ್ರ : | |

ಅಮರಾವತಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದರಿಂದ ಗನ್ನವರಂನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.

ಗನ್ನವರಂ ವಿಮಾನ ನಿಲ್ದಾಣದಿಂದ ಇಂದು ಸಂಜೆ 5.03ಕ್ಕೆ ಟೆಕ್ ಆಫ್ ಆದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು.

ಇದನ್ನು ಗಮನಿಸಿದ ಪೈಲಟ್, 5.27ಕ್ಕೆ ಮತ್ತೆ ಅದೇ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ವಿಮಾನವನ್ನು ಇಳಿಸಿದರು.

ಇದನ್ನೂ ಓದಿ: 

ಮಾರ್ಚ್ ತಿಂಗಳಲ್ಲಿ ವಿಶಾಖಪಟ್ಟಣದಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಶೃಂಗಸಭೆಯ ಪೂರ್ವಸಿದ್ಧಾತಾ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ದೆಹಲಿಗೆ ತೆರಳಬೇಕಾಗಿತ್ತು.

ಇದೀಗ ಮಂಗಳವಾರದಂದು ಮುಖ್ಯಮಂತ್ರಿಯವರ ದೆಹಲಿ ಪ್ರವಾಸಕ್ಕೆ ಅಧಿಕಾರಿಗಳು ಬದಲಿ ವಿಮಾನ ವ್ಯವಸ್ಥೆ ಕಲ್ಪಿಸಲು ಸಿದ್ಧತೆ ನಡೆಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು