ನವದೆಹಲಿ: ಸೂರತ್ ವಿಮಾನ ನಿಲ್ದಾಣದಿಂದ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪಕ್ಷಿ ಡಿಕ್ಕಿ ಹೊಡೆದ ಶಂಕೆಯ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ ದೆಹಲಿಗೆ ತೆರಳುತ್ತಿದ್ದ ಇಂಡಿಗೊ ವಿಮಾನವನ್ನು ಅಹಮದಾಬಾದ್‌ಗೆ ತಿರುಗಿಸಲಾಯಿತು ಎಂದು ವರದಿಯಾಗಿದೆ.
ಸೂರತ್‌ನಿಂದ ದೆಹಲಿಗೆ ಹೊರಟಿದ್ದ ವಿಮಾನವನ್ನು ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ.
ವಿಮಾನದಲ್ಲಿ 150 ಪ್ರಯಾಣಿಕರು ಸೇರಿದಂತೆ ಸಿಬ್ಬಂದಿ ಇದ್ದರು. ನಂತರ ಎಲ್ಲರನ್ನೂ ಸುರಕ್ಷಿತವಾಗಿ ಮತ್ತೊಂದು ವಿಮಾನದಲ್ಲಿ ದೆಹಲಿಗೆ ಕಳುಹಿಸಲಾಯಿತು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.