ಮಂಗಳವಾರ, ಡಿಸೆಂಬರ್ 1, 2020
18 °C

ಕೋವಿಡ್‌ ಮಾರ್ಗಸೂಚಿ ಪಾಲನೆ: ಮಾರುಕಟ್ಟೆ ವ್ಯಾಪಾರಿಗಳೊಂದಿಗೆ ಕೇಜ್ರಿವಾಲ್‌ ಚರ್ಚೆ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಮಾರುಕಟ್ಟೆಗಳಲ್ಲಿ ಕೋವಿಡ್‌ ಮಾರ್ಗಸೂಚಿ ನಿಯಮಗಳ ಪಾಲನೆ ಆಗಬೇಕಿದೆ. ಆ ವಿಚಾರವಾಗಿ ವ್ಯಾಪಾರಿಗಳ ಸಂಘದ ಪ್ರತಿನಿಧಿಗಳ ಜೊತೆ ಚರ್ಚೆ ನಡೆಸಲಿದ್ದೇನೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ತಿಳಿಸಿದ್ದಾರೆ.

ದೆಹಲಿಯಲ್ಲಿ ಹೆಚ್ಚುತ್ತಿರುವ ಕೋವಿಡ್‌ ಪ್ರಕರಣಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅವರು, 'ಮಾರುಕಟ್ಟೆಗಳಲ್ಲಿ ಕೋವಿಡ್‌ ಮಾರ್ಗಸೂಚಿ ನಿಯಮಗಳ ಪಾಲನೆ ಆಗಬೇಕಿದೆ. ಆ ವಿಚಾರವಾಗಿ ವ್ಯಾಪಾರಿಗಳ ಸಂಘದ ಪ್ರತಿನಿಧಿಗಳ ಜೊತೆ ಚರ್ಚೆ ನಡೆಸಲಿದ್ದೇನೆ. ಕೋವಿಡ್‌ ನಿಯಂತ್ರಣ ಮಾಡುವಲ್ಲಿ ವ್ಯಾಪಾರಿಗಳ ಸಂಘಟನೆಗಳು ಪ್ರಮುಖ ಪಾತ್ರ ವಹಿಸಬಹುದು' ಎಂದು ಕೇಜ್ರಿವಾಲ್‌ ಹೇಳಿದ್ದಾರೆ.

ಕಳೆದ ಹಲವು ದಿನಗಳಿಂದ ಕೊರೊನಾ ವೈರಸ್‌ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಾಗಿದ್ದು, ಮದುವೆ ಮತ್ತಿತರ ಸಮಾರಂಭಗಳಿಗೆ 200 ಮಂದಿ ಅತಿಥಿಗಳಿಗೆ ಸೇರಲು ಅವಕಾಶ ನೀಡಿದ್ದ ಆದೇಶವನ್ನು ಹಿಂಪಡೆಯಲು ದೆಹಲಿ ಸರ್ಕಾರ ನಿರ್ಧರಿಸಿತ್ತು. ಜೊತೆಗೆ, ಕೊರೊನಾ ಹಾಟ್‌ಸ್ಪಾಟ್‌ಗಳಾಗಿ ಪರಿವರ್ತನೆಯಾಗಬಹುದಾದ ಮಾರುಕಟ್ಟೆ ಪ್ರದೇಶಗಳಲ್ಲಿ ಲಾಕ್‌ಡೌನ್‌ ಜಾರಿಗೊಳಿಸಲು ಅಧಿಕಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮನವಿ ಸಲ್ಲಿಸಿದೆ.

ದೀಪಾವಳಿ ಹಬ್ಬದ ಸಮಯದಲ್ಲಿ ರಾಜಧಾನಿಯ ಮಾರುಕಟ್ಟೆ ಸೇರಿದಂತೆ ಹಲವು ಕಡೆಗಳಲ್ಲಿ ಜನರು ಮಾಸ್ಕ್‌ ಧರಿಸದೇ, ವ್ಯಕ್ತಿಗತ ಅಂತರ ಕಾಯ್ದುಕೊಳ್ಳದೇ ಓಡಾಡುತ್ತಿದ್ದದು ಕಂಡುಬಂದಿತ್ತು. ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘಿಸಿರುವ ಇಂಥ ಕಡೆಗಳಲ್ಲಿ ಕೊರೊನಾ ಸೋಂಕು ಹೆಚ್ಚುವ ಸಾಧ್ಯತೆ ಇದೆ. ಹೀಗಾಗಿ ಮಾರುಕಟ್ಟೆ ಪ್ರದೇಶಗಳ್ಲಲಿ ಲಾಕ್‌ಡೌನ್ ಜಾರಿಗೊಳಿಸಬೇಕಾದ್ದು ಅನಿವಾರ್ಯ ಎಂದು ಕೇಜ್ರಿವಾಲ್‌ ಅಭಿಪ್ರಾಯಪಟ್ಟಿದ್ದರು.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು