ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕಣಗಳನ್ನು ನಿಯಂತ್ರಿಸುವ ಸಂಬಂಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಸರ್ವಪಕ್ಷ ಸಭೆ ಕರೆದಿದ್ದಾರೆ.

ಕಳೆದ ಹಲವು ದಿನಗಳಿಂದ ಕೊರೊನಾ ವೈರಸ್ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಾಗಿದ್ದು, ಮದುವೆ ಮತ್ತಿತರ ಸಮಾರಂಭಗಳಿಗೆ 200 ಮಂದಿ ಅತಿಥಿಗಳಿಗೆ ಸೇರಲು ಅವಕಾಶ ನೀಡಿದ್ದ ಆದೇಶವನ್ನು ಹಿಂಪಡೆಯಲು ದೆಹಲಿ ಸರ್ಕಾರ ನಿರ್ಧರಿಸಿತ್ತು. ಜೊತೆಗೆ, ಕೊರೊನಾ ಹಾಟ್ಸ್ಪಾಟ್ಗಳಾಗಿ ಪರಿವರ್ತನೆಯಾಗಬಹುದಾದ ಮಾರುಕಟ್ಟೆ ಪ್ರದೇಶಗಳಲ್ಲಿ ಲಾಕ್ಡೌನ್ ಜಾರಿಗೊಳಿಸಲು ಅಧಿಕಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮನವಿ ಸಲ್ಲಿಸಿದೆ.

ದೀಪಾವಳಿ ಹಬ್ಬದ ಸಮಯದಲ್ಲಿ ರಾಜಧಾನಿಯ ಮಾರುಕಟ್ಟೆ ಸೇರಿದಂತೆ ಹಲವು ಕಡೆಗಳಲ್ಲಿ ಜನರು ಮಾಸ್ಕ್ ಧರಿಸದೇ, ವ್ಯಕ್ತಿಗತ ಅಂತರ ಕಾಯ್ದುಕೊಳ್ಳದೇ ಓಡಾಡುತ್ತಿದ್ದದು ಕಂಡುಬಂದಿತ್ತು. ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘಿಸಿರುವ ಇಂಥ ಕಡೆಗಳಲ್ಲಿ ಕೊರೊನಾ ಸೋಂಕು ಹೆಚ್ಚುವ ಸಾಧ್ಯತೆ ಇದೆ. ಹೀಗಾಗಿ ಮಾರುಕಟ್ಟೆ ಪ್ರದೇಶಗಳ್ಲಲಿ ಲಾಕ್ಡೌನ್ ಜಾರಿಗೊಳಿಸಬೇಕಾದ್ದು ಅನಿವಾರ್ಯ ಎಂದು ಕೇಜ್ರಿವಾಲ್ ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ... ಪಟಾಕಿ ನಿಷೇಧ ಆದೇಶದ ಉಲ್ಲಂಘನೆ; ದೆಹಲಿಯಲ್ಲಿ ಕುಸಿದ ಗಾಳಿಯ ಗುಣಮಟ್ಟ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.