ಮಂಗಳವಾರ, ಡಿಸೆಂಬರ್ 1, 2020
19 °C

ದೀಪಾವಳಿ-2020: ದೆಹಲಿಯ ಅಕ್ಷರಧಾಮ ದೇವಾಸ್ಥಾನದಲ್ಲಿ ಪೂಜೆ ಸಲ್ಲಿಸಿದ ಕೇಜ್ರಿವಾಲ್‌

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೀಪಾವಳಿ ಪ್ರಯುಕ್ತ ಶನಿವಾರ ಸಂಜೆ ದೆಹಲಿಯ ಅಕ್ಷರಧಾಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.

ಕೇಜ್ರಿವಾಲ್‌ ಕುಟುಂಬ ಸದಸ್ಯರು, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಅವರ ಸಂಪುಟದ ಇತರ ಸದಸ್ಯರು ಪೂಜೆಯಲ್ಲಿ ಭಾಗವಹಿಸಿದ್ದರು

ದೀಪಾವಳಿ ಪ್ರಯುಕ್ತ ಅಕ್ಷರಧಾಮ ದೇವಸ್ಥಾನದ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ದೀಪಾವಳಿ ಪೂಜೆಯಲ್ಲಿ ಭಾಗವಹಿಸುವುದಾಗಿ ಕೇಜ್ರಿವಾಲ್‌ ಗುರುವಾರ ಘೋಷಿಸಿದ್ದರು. ಹಬ್ಬದ ದಿನಗಳಂದು ಪಟಾಕಿ ಸಿಡಿಸಬಾರದು ಎಂದು ಅವರು ದೆಹಲಿ ಜನರಿಗೆ ಮನವಿ ಮಾಡಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು