ಕೋವಿಡ್ ಲಸಿಕೆಗೆ ಅನುಮೋದನೆ: ವಿಜ್ಞಾನಿ, ವೈದ್ಯರಿಗೆ ಕೇಜ್ರಿವಾಲ್ ಧನ್ಯವಾದ

ನವದೆಹಲಿ: ಕೋವಿಡ್ ಚಿಕಿತ್ಸೆಗಾಗಿ ಭಾರತದಲ್ಲಿ ತಯಾರಿಸಲಾದ ಎರಡು ಲಸಿಕೆಗಳಿಗೆ ಅನುಮೋದನೆ ದೊರೆತಿರುವ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಭಾರತದಲ್ಲಿ ತಯಾರಿಸಲಾದ ಲಸಿಕೆಗಳ ತುರ್ತುಬಳಕೆಗೆ ಅನುಮೋದನೆ ದೊರೆತಿದೆ. ಕೊರೊನಾ ವೈರಸ್ ವಿರುದ್ಧ ದೇಶ ನಡೆಸುತ್ತಿರುವ ಹೋರಾಟಕ್ಕೆ ಇದರಿಂದ ಸಕಾರಾತ್ಮಕ ನಿರ್ದೇಶನ ಸಿಗಲಿದೆ ಎಂದು ಕೇಜ್ರಿವಾಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ವಿಚಾರವಾಗಿ ಭಾನುವಾರ ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, 'ಎಲ್ಲಾ ದೇಶವಾಸಿಗಳಿಗೆ ಅಭಿನಂದನೆಗಳು. ಭಾರತದಲ್ಲಿ ತಯಾರಿಸಲಾದ ಎರಡು ಲಸಿಕೆಗಳ ತುರ್ತು ಬಳಕೆಗೆ ಡಿಸಿಜಿಐ ಅನುಮೋದಿಸಿದೆ. ಕೊರೊನಾ ವೈರಸ್ ವಿರುದ್ಧ ದೇಶ ನಡೆಸುತ್ತಿರುವ ಹೋರಾಟಕ್ಕೆ ಇದರಿಂದ ಸಕಾರಾತ್ಮಕ ನಿರ್ದೇಶನ ಸಿಗಲಿದೆ. ನಾವು ಈ ಹಂತಕ್ಕೆ ತಲುಪಲು ಸಹಾಯ ಮಾಡಿದ ವಿಜ್ಞಾನಿಗಳು ಮತ್ತು ವೈದ್ಯರಿಗೆ ಧನ್ಯವಾದ' ಎಂದು ತಿಳಿಸಿದ್ದಾರೆ.
ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್ ಸಂಸ್ಥೆಗಳಿಗೆ ತುರ್ತು ಪರಿಸ್ಥಿತಿಯಲ್ಲಿ ಷರತ್ತುಬದ್ಧ ಲಸಿಕೆ ಬಳಕೆಗೆ ಡಿಸಿಜಿಐ ಭಾನುವಾರ ಅನುಮೋದನೆ ನೀಡಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.