ಶುಕ್ರವಾರ, ಮೇ 7, 2021
26 °C

ಸೋಂಕಿತರಿಗೆ ಸಕಾಲದಲ್ಲಿ ಚಿಕಿತ್ಸೆ; ಕ್ರಮ ಕೈಗೊಳ್ಳುವಂತೆ ದೆಹಲಿ ಸಿಎಂ ಸೂಚನೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು, ಸೋಂಕಿತರ ಪ್ರತ್ಯೇಕ ವಾಸ (ಹೋಂ ಐಸೊಲೇಷನ್‌) ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಸಲುವಾಗಿ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ, ರಾಜ್ಯ ಮುಖ್ಯಕಾರ್ಯದರ್ಶಿ ಮತ್ತು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರೊಂದಿಗೆ ಸೋಮವಾರ ಪರಿಶೀಲನಾ ಸಭೆ ನಡೆಸಿದರು.

ಕೇಜ್ರಿವಾಲ್‌ ಅವರು ಸಭೆ ವೇಳೆ, ಸೋಂಕಿತರು ತಮ್ಮ ಮನೆಗಳಲ್ಲಿದ್ದುಕೊಂಡೇ ಸಕಾಲದಲ್ಲಿ ಸಮಾಲೋಚನೆಯೊಂದಿಗೆ ಉತ್ತಮ ಚಿಕಿತ್ಸೆ ಪಡೆಯುವಂತಾಗಲು ಮತ್ತು ವೈದ್ಯಕೀಯ ಸಿಬ್ಬಂದಿ ಸೋಂಕಿತರೊಂದಿಗೆ ನಿಯಮಿತವಾಗಿ ಸಂಪರ್ಕ ಸಾಧಿಸಲು ಹೋಂ ಐಸೊಲೇಷನ್‌ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಎಷ್ಟು ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಎಷ್ಟು ಜನರು ಮನೆಗಳಲ್ಲಿಯೇ ಪ್ರತ್ಯೇಕವಾಸದಲ್ಲಿದ್ದಾರೆ ಎಂಬುದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಇಡಬೇಕು ಎಂದು ಸ್ಪಷ್ಟವಾಗಿ ಸೂಚಿಸಿದ್ದಾರೆ. ಜೊತೆಗೆ, ʼಮನೆಗಳಲ್ಲಿ ಪ್ರತ್ಯೇಕವಾಸದಲ್ಲಿ ಇರುವವರಿಗೆ ಸೋಂಕಿನ ಪಾಸಿಟಿವ್‌ ವರದಿ ಬಂದ 24 ಗಂಟೆಗಳ ಒಳಗಾಗಿ, ಅವರನ್ನು ಕರೆ ಮೂಲಕ ಸಂಪರ್ಕಿಸಿ ಸಾಮಾಲೋಚನೆ ಆರಂಭಿಸಬೇಕುʼ ಎಂದೂ ತಿಳಿಸಿದ್ದಾರೆ.

18,043 ಹೊಸ ಪ್ರಕರಣ
ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ ಒಟ್ಟು 18,043 ಹೊಸ ಪ್ರಕರಣಗಳು ವರದಿಯಾಗಿವೆ. 448 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಈ ಹಿಂದೆ ಒಂದೇದಿನದಲ್ಲಿ ಇಷ್ಟು ಸಂಖ್ಯೆಯಲ್ಲಿ ಸೋಂಕಿತರು ಮೃತಪಟ್ಟಿರಲಿಲ್ಲ.

ಸದ್ಯ ದೆಹಲಿಯಲ್ಲಿ 89,592 ಸಕ್ರಿಯ ಪ್ರಕರಣಗಳು ಇವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು