ಮಂಗಳವಾರ, ಆಗಸ್ಟ್ 16, 2022
29 °C

ವಿಡಿಯೊ: ರಾಹುಲ್ ಬೆಂಬಲಿಗನಿಗೆ ಕಾರಿನಲ್ಲಿ ಡ್ರಾಪ್ ಕೊಟ್ಟ ಪ್ರಿಯಾಂಕಾ ಗಾಂಧಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ವಿಚಾರಣೆಗೆ ಒಳಪಡಿಸುವುದರ ವಿರುದ್ಧ ಪಕ್ಷದ ಕಾರ್ಯಕರ್ತರು, ನಾಯಕರು ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ತೆರಳುತ್ತಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಾರ್ಗ ಮಧ್ಯೆ ಇದ್ದ ರಾಹುಲ್ ಅಭಿಮಾನಿಯೊಬ್ಬರನ್ನು ತಮ್ಮ ಕಾರಿನಲ್ಲಿ ಕರೆದೊಯ್ದಿದ್ದಾರೆ.

ರಾಹುಲ್ ಗಾಂಧಿ ಅಭಿಮಾನಿ ಪ್ರಿಯಾಂಕಾ ಅವರ ಕಾರಿನಲ್ಲಿ ತೆರಳಿದ ವಿಡಿಯೊವನ್ನು ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ಈ ಮಧ್ಯೆ, ರಾಹುಲ್ ಗಾಂಧಿ ಅವರು ಸೋಮವಾರ ಜಾರಿ ನಿರ್ದೇಶನಾಲಯ ಕಚೇರಿಗೆ ವಿಚಾರಣೆಗೆ ಹಾಜರಾದರು. ಇದರೊಂದಿಗೆ, ಅವರು ನಾಲ್ಕನೇ ಬಾರಿ ವಿಚಾರಣೆಗೆ ಹಾಜರಾದಂತಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು