ನವದೆಹಲಿ: ಕೊರೊನಾ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ರಾಷ್ಟ್ರ ರಾಜಧಾನಿಲ್ಲಿ ಲಾಕ್‌ಡೌನ್ ಘೋಷಿಸಿದ ಎರಡು ವಾರಗಳ ಬಳಿಕ, ಪರೀಕ್ಷೆಗೆ ಒಳಪಟ್ಟವರ ಪೈಕಿ ಸೋಂಕು ಪತ್ತೆಯಾಗಿರುವ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ.

ಆದರೂ, ಉಸಿರಾಟದ ತೀವ್ರ ಸಮಸ್ಯೆ ಎದುರಿಸುತ್ತಿರುವ ರೋಗಿಗಳು ಆಮ್ಲಜನಕ ದೊರೆಯದೆ ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರಗೆ ಎಡತಾಕುವುದು ಮುಂದುವರಿದಿದೆ.

ಓದಿ:ಜೀವಗಳು ಅಪಾಯದಲ್ಲಿವೆ, ದುರಂತ ಸಂಭವಿಸಬಹುದು: ದೆಹಲಿಯ ಆಸ್ಪತ್ರೆ ಸಿಬ್ಬಂದಿ

ಭಾನುವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಪರೀಕ್ಷೆಗೆ ಒಳಪಟ್ಟಿರುವ 71,997 ಜನರ ಪೈಕಿ 20,394 (ಶೇ 28.33) ಜನರಲ್ಲಿ ಸೋಂಕು ದೃಢಪಟ್ಟಿದೆ.

ಕಳೆದ 15 ದಿನಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಪರೀಕ್ಷೆಗೆ ಒಳಪಟ್ಟವರಲ್ಲಿ ಸೋಂಕಿಗೆ ಒಳಗಾದವರ ಪ್ರಮಾಣ ಶೇ 30ಕ್ಕಿಂತ ಕಡಿಮೆ ಪ್ರಮಾಣಕ್ಕೆ ಇಳಿದಿದೆ. ಶನಿವಾರ ಶೇ 31.61ರಷ್ಟು ಜನರಲ್ಲಿ ಸೋಂಕು ಪತ್ತೆಯಾಗಿತ್ತು.

24,444 ಜನ ಗುಣಮುಖರಾಗಿದ್ದಾರೆ. ಈ ಸಂಖ್ಯೆಯು ಸೋಂಕಿತರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗಿರುವುದು ಸ್ವಲ್ಪ ಮಟ್ಟಿನ ಸಮಾಧಾನಕ್ಕೆ ಕಾರಣವಾಗಿದೆ. ಶನಿವಾರದಿಂದ ಹೊಸದಾಗಿ ಸೊಂಕಿಗೆ ಒಳಗಾಗುತ್ತಿರುವವರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬರುತ್ತಿರುವುದೂ ಆತಂಕ ತಗ್ಗಲು ಕಾರಣವಾಗಿದೆ.

ಆದರೆ, ಇದೇ ಅವಧಿಯಲ್ಲಿ ಸಾವಿನ ಪ್ರಮಾಣದಲ್ಲಿ ಸಾಕಷ್ಟು ಪ್ರಮಾಣದ ಸುಧಾರಣೆ ಸಾಧ್ಯವಾಗದೆ, ಒಟ್ಟು 407 ಜನ ಮೃತಪಟ್ಟಿದ್ದಾರೆ. ನಗರದಲ್ಲಿ ಇದುವರೆಗೆ ಕೊರೊನಾಗೆ ಜೀವ ಕಳೆದುಕೊಂಡವರ ಸಂಖ್ಯೆ 16,966ಕ್ಕೆ ತಲುಪಿದೆ.

ಶನಿವಾರ ಒಂದು ಲಕ್ಷಕ್ಕೆ ಸಮೀಪಿಸಿದ್ದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆಯು 92,290ಕ್ಕೆ ಇಳಿದಿದ್ದರೂ, ಆಸ್ಪತ್ರೆಗಳಲ್ಲಿ ಹಾಸಿಗೆಯ ಕೊರತೆ ಮುಂದುವರಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.