ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ 'ಶಿವಲಿಂಗ' ಪತ್ತೆ ಕುರಿತ ಹೇಳಿಕೆಗಳನ್ನು ಉಲ್ಲೇಖಿಸಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ಆರೋಪದಲ್ಲಿ ಬಂಧಿತರಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ರತನ್ ಲಾಲ್ ಅವರಿಗೆ ದೆಹಲಿ ನ್ಯಾಯಾಲಯ ಶನಿವಾರ ಜಾಮೀನು ನೀಡಿದೆ.

ರತನ್ ಲಾಲ್ ಅವರನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿತ್ತು.

ಜ್ಞಾನವಾಪಿಯಲ್ಲಿ ಶಿವಲಿಂಗ ಪತ್ತೆ ಕುರಿತು ಆಕ್ಷೇಪಾರ್ಹ ಪೋಸ್ಟ್: ಪ್ರೊಫೆಸರ್ ಬಂಧನ

ಭಾರತೀಯ ದಂಡ ಸಂಹಿತೆಯ 153ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಮೇಲೆ ದುಷ್ಪರಿಣಾಮ ಬೀರುವ ಕೃತ್ಯಗಳು) ಮತ್ತು 295ಎ (ಉದ್ದೇಶಪೂರ್ವಕವಾಗಿ ಯಾವುದೇ ವರ್ಗದ ಧಾರ್ಮಿಕ ಭಾವನೆಗಳು, ಧರ್ಮವನ್ನು ಅವಮಾನಿಸುವ ಕೃತ್ಯ) ಅಡಿಯಲ್ಲಿ ಲಾಲ್ ಅವರನ್ನು ಬಂಧಿಸಲಾಗಿದೆ ಎಂದು ದೆಹಲಿಯ ಉತ್ತರ ಸೈಬರ್ ಪೊಲೀಸರು ತಿಳಿಸಿದ್ದರು.

ದೆಹಲಿ ಮೂಲದ ವಕೀಲರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮಂಗಳವಾರ ರಾತ್ರಿ ಲಾಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.