ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಪ್ರತಿಭಟನೆ: ಪತ್ರಕರ್ತ ಮನ್‌ದೀಪ್‌ಗೆ ಜಾಮೀನು

Last Updated 2 ಫೆಬ್ರುವರಿ 2021, 13:28 IST
ಅಕ್ಷರ ಗಾತ್ರ

ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು ಗಡಿಯಿಂದ ದೆಹಲಿ ಪೊಲೀಸರು ಬಂಧಿಸಿದ್ದ ಫ್ರೀಲಾನ್ಸ್ ಪತ್ರಕರ್ತ ಮನ್‌ದೀಪ್‌ ಪೂನಿಯಾ ಅವರಿಗೆ ದೆಹಲಿಯ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ಮೆಟ್ರೊಪಾಲಿಟನ್‌ ನ್ಯಾಯಾಧೀಶ ಸತ್ವೀರ್‌ ಸಿಂಗ್‌ ಲಾಂಬಾ ಅವರು, ‘ಪ್ರಕರಣದಲ್ಲಿ ದೂರುದಾರರು, ಸಾಕ್ಷಿಗಳು ಪೊಲೀಸರೇ ಆಗಿರುವುದರಿಂದ ಆರೋಪಿಯು ತನಿಖೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇಲ್ಲ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪೂನಿಯಾ ಅವರನ್ನು ಭಾನುವಾರ ಬಂಧಿಸಿದ್ದ ಪೊಲೀಸರು, ಅವರ ವಿರುದ್ಧ ಭಾರತೀಯ ದಂಡಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿದ್ದರು.

ನ್ಯಾಯಾಲಯದ ಪೂರ್ವಾನುಮತಿ ಪಡೆಯದೆ ದೇಶ ಬಿಟ್ಟು ಹೋಗಬಾರದು. ತನಿಖೆಗೆ ಸಹಕರಿಸಬೇಕು ಎಂದು ನ್ಯಾಯಾಲಯ ಪೂನಿಯಾ ಅವರಿಗೆ ನಿರ್ದೇಶಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT