ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ತೀರ್ಪು ಅನ್ನು ಮಾರ್ಚ್ 31ಕ್ಕೆ ಪ್ರಕಟಿಸುವುದಾಗಿ ಇಲ್ಲಿಯ ನ್ಯಾಯಾಲಯ ಶುಕ್ರವಾರ ತಿಳಿಸಿದೆ.
ಮನೀಶ್ ಅವರ ಪ್ರಕರಣಕ್ಕೆ ಸಂಬಂಧಿಸಿದ ವಾದದ ಅಂಶಗಳಿರುವ ಕಿರು ಟಿಪ್ಪಣಿಯನ್ನು ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ನೀಡಿದ ಬಳಿಕ ವಿಶೇಷ ನ್ಯಾಯಾಧೀಶ ಎಂ. ಕೆ.ನಾಗ್‌ಪಾಲ್ ಅವರು ಆದೇಶವನ್ನು ಕಾಯ್ದಿರಿಸಿದ್ದಾರೆ.
ಅಬಕಾರಿ ನೀತಿ ಅನುಷ್ಠಾನದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಫೆ.26ರಂದು ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.