ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: 19,166 ಹೊಸ ಕೋವಿಡ್‌ ಪ್ರಕರಣ, ಪಾಸಿಟಿವಿಟಿ ದರ ಶೇ 25ಕ್ಕೆ ಏರಿಕೆ

Last Updated 10 ಜನವರಿ 2022, 15:47 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ 19,166 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 17 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 14,076 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದು, ಈ ವರೆಗೆ 14,77,913 ಸೋಂಕಿತರು ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇ 25 ರಷ್ಟಿದೆ.

ಈ ವರೆಗೆ ದೆಹಲಿಯಲ್ಲಿ ಕೋವಿಡ್‌ನಿಂದಾಗಿ 25,177 ಸೋಂಕಿತರು ಮೃತಪಟ್ಟಿದ್ದಾರೆ.

24 ಗಂಟೆಗಳಲ್ಲಿ ದೇಶದಲ್ಲಿ 1,79,723 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದೇ ಅವಧಿಯಲ್ಲಿ 146 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಸಕ್ರಿಯ ಪ್ರಕರಣಗಳ ಒಟ್ಟು ಸಂಖ್ಯೆ 7,23,619ಕ್ಕೆ ಏರಿದ್ದು, ದೇಶದ ಪಾಸಿಟಿವಿಟಿ ದರ ಶೇಕಡ 13.29ಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT