ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದುವರಿದಿದೆ ಕೊರೊನಾ ಅಟ್ಟಹಾಸ; ದೆಹಲಿಯಲ್ಲಿ 347 ಜನರ ಸಾವು

Last Updated 25 ಏಪ್ರಿಲ್ 2021, 4:28 IST
ಅಕ್ಷರ ಗಾತ್ರ

ನವದೆಹಲಿ: ಒಂದು ವಾರದಿಂದ ಲಾಕ್‌ಡೌನ್‌ ಘೋಷಿಸಿ, ಜನರ ಗುಂಪುಗೂಡುವಿಕೆಯನ್ನು ನಿಯಂತ್ರಿಸಿದ್ದರೂ ದೆಹಲಿಯಲ್ಲಿ ಕೊರೊನಾ ಕಂಟಕ ಮುಂದುವರಿದಿದೆ.

ಶನಿವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ದೆಹಲಿಯ ವಿವಿಧೆಡೆ ಪರೀಕ್ಷೆಗೆ ಒಳಪಟ್ಟಿರುವ 74,702 ಜನರ ಪೈಕಿ (ಶೇ 32.27ರಷ್ಟು) ಹೊಸದಾಗಿ 24,103 ಜನಕ್ಕೆ ಕೊರೊನಾ ಸೋಂಕು ತಗುಲಿದೆ. ಚಿಕಿತ್ಸೆಗೆ ಸ್ಪಂದಿಸದೆ 347 ಜನ ಸೋಂಕಿತರು ಸಾವಿಗೀಡಾಗಿದ್ದಾರೆ. ಇದೇ ವೇಳೆ 22,695 ಜನ ಗುಣಮುಖರಾಗಿ ಮನೆಗೆ ಮರಳಿದ್ದು, ಪ್ರಸ್ತುತ 93,080 ಸಕ್ರಿಯ ಪ್ರಕರಣಗಳಿವೆ.

ಕಳೆದ ಮಾರ್ಚ್‌ನಿಂದ ಇದುವರೆಗೆ ಸೋಂಕಿಗೆ ಒಳಗಾದವರ ಸಂಖ್ಯೆ 10 ಲಕ್ಷದ ಗಡಿ ದಾಟಿದ್ದು, ಶನಿವಾರ 10,04,782 ತಲುಪಿದೆ. ಇದುವರೆಗೆ ಒಟ್ಟು 13,898 ಜನ ಸಾವಿಗೀಡಾಗಿದ್ದಾರೆ. 8,97,804 ಜನ ಗುಣಮುಖರಾಗಿದ್ದಾರೆ.

ಕೊರೊನಾ ತಹಬದಿಗೆ ತರುವ ಸಲುವಾಗಿ ನಗರದಾದ್ಯಂತ ಒಟ್ಟು 28,79,510 ಜನರಿಗೆ ಲಸಿಕೆ ನೀಡಲಾಗಿದ್ದು, ಉಚಿತ ಲಸಿಕೆ ಅಭಿಯಾನ ಮುಂದುವರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT