ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಸೋಡಿಯಾ ನಿವಾಸದ ಮೇಲೆ ಸಿಬಿಐ ದಾಳಿ ವಿರೋಧಿಸಿ ಪ್ರತಿಭಟನೆ: ಎಎಪಿ ಬೆಂಬಲಿಗರ ಸೆರೆ

Last Updated 19 ಆಗಸ್ಟ್ 2022, 9:11 IST
ಅಕ್ಷರ ಗಾತ್ರ

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದೆ. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಆಮ್‌ ಆದ್ಮಿ ಪಕ್ಷದ(ಎಎಪಿ) ಬೆಂಬಲಿಗರನ್ನು ಪೊಲೀಸರು ಬಂಧಿಸಿದ್ದಾರೆ.

ಸಿಸೋಡಿಯಾ ನಿವಾಸದ ಬಳಿ ಇರುವ ಮಥುರಾ ರಸ್ತೆಯಲ್ಲಿ ಎಎಪಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಪ್ರತಿಭಟನಾಕಾರರನ್ನು ಸ್ಥಳದಿಂದ ತೆರವುಗೊಳಿಸಲಾಗಿದೆ ಮತ್ತು ಬಸ್‌ಗಳಲ್ಲಿ ವಸಂತ್ ಕುಂಜ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ’ ಎಂದು ಅವರು ಹೇಳಿದ್ದಾರೆ.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರ ಮನೆ ಸಹಿತ ದೆಹಲಿ ಎನ್‌ಸಿಆರ್‌ನ 21 ಸ್ಥಳಗಳಲ್ಲಿ ದಾಳಿ ನಡೆಸಿರುವ ಸಿಬಿಐ, ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ಸಿಬಿಐ ದಾಳಿಯನ್ನು ಸ್ವಾಗತಿಸಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT