ನವದೆಹಲಿ: ದೆಹಲಿ ಸರ್ಕಾರದ ಅಬಕಾರಿ ನೀತಿ ಹಗರಣ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯ 14 ದಿನಗಳ ವರೆಗೆ ವಿಸ್ತರಿಸಲಾಗಿದೆ.
ಇದರಿಂದಾಗಿ ಸಿಸೋಡಿಯಾ ಅವರು ಏಪ್ರಿಲ್ 3ರ ವರೆಗೆ ನ್ಯಾಯಾಂಗ ಬಂಧನದಲ್ಲಿ ಉಳಿಯಲಿದ್ದಾರೆ.
ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಜಾರಿಗೊಳಿಸಿದ್ದ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲ್ಲಾದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳು ಫೆಬ್ರುವರಿ 26 ರಂದು ಬಂಧಿಸಿದ್ದರು. ಅವರನ್ನು ತಿಹಾರ್ ಜೈಲ್‌ನಲ್ಲಿರಿಸಲಾಗಿತ್ತು. ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಸಿಸೋಡಿಯಾ ಅವರನ್ನು ಮಾರ್ಚ್ 9ರಂದು ಬಂಧಿಸಿತ್ತು.
ಇ.ಡಿ ಅಧಿಕಾರಿಗಳು ಆಮ್ ಆದ್ಮಿ ಪಕ್ಷದ ಹಿರಿಯ ನಾಯಕರಾಗಿರುವ ಸಿಸೋಡಿಯಾ ವಿರುದ್ಧ ಹಣ ಅಕ್ರಮ ವರ್ಗಾವಣೆ ಆರೋಪದ ಮೇಲೆ ತನಿಖೆ ನಡೆಸುತ್ತಿದೆ.
ಇದನ್ನೂ ಓದಿ: ಸಿಬಿಐ ಬಳಿಕ ಇ.ಡಿಯಿಂದಲೂ ಮನೀಶ್ ಸಿಸೋಡಿಯಾ ಬಂಧನ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.