ಗುರುವಾರ , ಫೆಬ್ರವರಿ 9, 2023
30 °C

ಭ್ರಷ್ಟಾಚಾರ ಪ‍್ರಕರಣ: ಡಿ.11ರಂದು ಹಾಜರಾಗಲು ಕವಿತಾಗೆ ಸಿಬಿಐ ನೋಟಿಸ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೆಹಲಿ ಅಬಕಾರಿ ನೀತಿ ಪ‍್ರಕರಣಕ್ಕೆ ಸಂಬಂಧಿಸಿ ಡಿಸೆಂಬರ್‌ 11ರಂದು ಹೈದರಾಬಾದ್‌ನಲ್ಲಿ ವಿಚಾರಣೆಗೆ ಹಾಜರಾಗುವಂತೆ  ಬಿಆರ್‌ಎಸ್‌ನ ವಿಧಾನ ಪರಿಷತ್‌ ಸದಸ್ಯೆ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್‌ ಅವರ ಪುತ್ರಿ ಕೆ. ಕವಿತಾ ಅವರಿಗೆ ಸಿಬಿಐ ನೋಟಿಸ್‌ ನೀಡಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.

ವಿಚಾರಣೆಗೆ ಹಾಜರಾಗುವ ದಿನಾಂಕವನ್ನು ಮುಂದೂಡಬೇಕೆಂದು ಕವಿತಾ ಅವರು ಕೋರಿದ್ದರು, ಈ ಕಾರಣಕ್ಕೆ ವಿಚಾರಣಾ ದಿನಾಂಕವನ್ನು ಡಿ.11ಕ್ಕೆ ನಿಗದಿ ಪಡಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಡಿಸೆಂಬರ್‌ 2 ರಂದು ಸಿಬಿಐ ನೀಡಿದ್ದ ಮೊದಲ ನೋಟಿಸ್‌ಗೆ ಪ್ರತಿಕ್ರಿಯಿಸಿದ್ದ ಕವಿತಾ ಅವರು,‘ಎಫ್‌ಐಆರ್‌ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯನ್ನು ಪರಿಶೀಲಿಸಿದ್ದೇನೆ. ಎಲ್ಲಿಯೂ ನನ್ನ ಹೆಸರನ್ನು ಉಲ್ಲೇಖಿಸಿಲ್ಲ’ ಎಂದಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು