ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ.ಕವಿತಾ ಅವರು ಜಾರಿ ನಿರ್ದೇಶನಾಲಯದ (ಇ.ಡಿ.) ಮುಂದೆ ಎರಡನೇ ಸುತ್ತಿನ ವಿಚಾರಣೆಗೆ ಹಾಜರಾಗಿದ್ದರು ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರನ್ನು ಮಾರ್ಚ್ 11 ರಂದು ಇ.ಡಿ ಅಧಿಕಾರಿಗಳು ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು.
ಇ.ಡಿ. ವಿಚಾರಣೆಯನ್ನು ಪ್ರಶ್ನಿಸಿ ಕವಿತಾ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮಾರ್ಚ್ 24ರಂದು ನಡೆಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.