ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇ.ಡಿ ಮುಂದೆ ಹಾಜರಾದ ಬಿಆರ್‌ಎಸ್‌ ನಾಯಕಿ ಕವಿತಾ

ದೆಹಲಿ ಅಬಕಾರಿ ನೀತಿ ಪ್ರಕರಣ
Last Updated 11 ಮಾರ್ಚ್ 2023, 11:47 IST
ಅಕ್ಷರ ಗಾತ್ರ

ನವದೆಹಲಿ: ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ನಾಯಕಿ ಕೆ. ಕವಿತಾ ಅವರು ದೆಹಲಿಯ ಅಬಕಾರಿ ನೀತಿ ಹಗರಣ ಸಂಬಂಧ ವಿಚಾರಣೆ ಎದುರಿಸಲು ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ಶನಿವಾರ ಹಾಜರಾದರು.

ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ (ಕೆಸಿಆರ್‌) ಅವರ ಪುತ್ರಿಯಾದ ಕವಿತಾ ಅವರು ತುಘಲಕ್ ರಸ್ತೆಯಲ್ಲಿರುವ ತಮ್ಮ ತಂದೆಯ ಅಧಿಕೃತ ನಿವಾಸದಿಂದ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇ.ಡಿ ಪ್ರಧಾನ ಕಚೇರಿಗೆ ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಂದರು.

ಕವಿತಾ ಅವರ ವಿಚಾರಣೆಯನ್ನು ವಿರೋಧಿಸಿ ಬಿಆರ್‌ಎಸ್‌ ಬೆಂಬಲಿಗರು ಇ.ಡಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ದೆಹಲಿ ಪೊಲೀಸರು ಮತ್ತು ಕೇಂದ್ರ ಅರೆಸೇನಾ ಪಡೆ ಸಿಬ್ಬಂದಿ ದೊಡ್ಡ ಸಂಖ್ಯೆಯಲ್ಲಿ ಇಲ್ಲಿ ಜಮಾಯಿಸಿದ್ದರು.

ಮಾರ್ಚ್‌ 9 ರಂದು ವಿಚಾರಣೆಗೆ ಹಾಜರಾಗುವಂತೆ ಕವಿತಾ ಅವರಿಗೆ ಇ.ಡಿ ಸಮನ್ಸ್‌ ನೀಡಿತ್ತು. ಆದರೆ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ಆಗ್ರಹಿಸಿ ಅವರು ಅದೇ ದಿನ (ಶುಕ್ರವಾರ) ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದ ಕಾರಣ ಬೇರೊಂದು ದಿನ ನಿಗದಿಗೆ ಕೋರಿದ್ದರು.

ಈ ಪ್ರಕರಣದಲ್ಲಿ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನಿಷ್‌ ಸಿಸೋಡಿಯಾ ಮತ್ತು ಹೈದರಾಬಾದ್ ಮೂಲದ ಉದ್ಯಮಿ ಅರುಣ್ ರಾಮಚಂದ್ರನ್‌ ಪಿಳ್ಳೈ ಅವರ ಬಂಧನದ ಬಳಿಕ ಕವಿತಾ ಅವರ ವಿಚಾರಣೆ ನಡೆದಿದೆ.

ಕವಿತಾ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿರುವ ಅರುಣ್ ರಾಮಚಂದ್ರನ್ ಪಿಳ್ಳೈ ಅವರನ್ನು ಇ.ಡಿ ಇತ್ತೀಚೆಗಷ್ಟೇ ಬಂಧಿಸಿತ್ತು. ಇದಕ್ಕೆ ಪೂರಕವಾಗಿ ಕವಿತಾ ಅವರ ವಿಚಾರಣೆಯನ್ನು ಇ.ಡಿ ಕೈಗೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT