ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಅಬಕಾರಿ ನೀತಿ ಹಗರಣ: ಮನೀಶ್‌ ಸಿಸೋಡಿಯಾ ಜಾಮೀನು ಅರ್ಜಿ ವಜಾ

Last Updated 31 ಮಾರ್ಚ್ 2023, 11:19 IST
ಅಕ್ಷರ ಗಾತ್ರ

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಇಲ್ಲಿಯ ವಿಶೇಷ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.

ಮಾರ್ಚ್ 24ರಂದು ಮನೀಶ್‌ ಅವರ ಪ್ರಕರಣಕ್ಕೆ ಸಂಬಂಧಿಸಿದ ವಾದದ ಅಂಶಗಳಿರುವ ಕಿರು ಟಿಪ್ಪಣಿಯನ್ನು ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ನೀಡಿದ ಬಳಿಕ ವಿಶೇಷ ನ್ಯಾಯಾಧೀಶ ಎಂ. ಕೆ.ನಾಗ್‌ಪಾಲ್‌ ಅವರು ಆದೇಶವನ್ನು ಕಾಯ್ದಿರಿಸಿದ್ದರು.

ಅಬಕಾರಿ ನೀತಿ ಅನುಷ್ಠಾನದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಫೆ.26ರಂದು ಮನೀಶ್‌ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT