ಮಂಗಳವಾರ, ನವೆಂಬರ್ 29, 2022
29 °C

ದೆಹಲಿ ಅಬಕಾರಿ ನೀತಿ ಹಗರಣ: ದೆಹಲಿ, ಪಂಜಾಬ್ ಸೇರಿ 35 ಕಡೆ ಇ.ಡಿ ದಾಳಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೆಹಲಿ ಸರ್ಕಾರವು ಇತ್ತೀಚೆಗೆ ಹಿಂಪಡೆದುಕೊಂಡಿದ್ದ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಯವು(ಇ.ಡಿ) ದೇಶದ ಹಲವೆಡೆ ದಾಳಿ ನಡೆಸಿದೆ.

ದೆಹಲಿ, ಪಂಜಾಬ್ ಮತ್ತು ಹೈದರಾಬಾದ್‌ ಸೇರಿದಂತೆ 35 ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮದ್ಯ ಹಂಚಿಕೆದಾರರು, ಮದ್ಯ ಕಂಪನಿಗಳು ಮತ್ತು ಅವುಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೆಶನಾಲಯವು ಈವರೆಗೆ, 103 ಶೋಧ ಕಾರ್ಯಾಚರಣೆಗಳನ್ನು ನಡೆಸಿದೆ. ಇಂಡೋಸ್ಪಿರಿಟ್ ಎಂಬ ಮದ್ಯ ತಯಾರಿಕಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ(ಎಂ.ಡಿ) ಮತ್ತು ಉದ್ಯಮಿ ಸಮೀರ್ ಮಹಂದ್ರು ಎಂಬುವರನ್ನು ಬಂಧಿಸಲಾಗಿದೆ.

ದೆಹಲಿ ಅಬಕಾರಿ ನೀತಿ 2021–22ರ ಜಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಶಿಫಾರಸು ಮಾಡಿದ್ದರು. ಅಲ್ಲದೆ, ಕೆಲವು ಅಧಿಕಾರಿಗಳನ್ನೂ ಅವರು ಅಮಾನತು ಮಾಡಿದ್ದರು. ಈ ಸಂಬಂಧ ಸಿಬಿಐ ಎಫ್‌ಐಆರ್ ದಾಖಲಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು