ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಅಬಕಾರಿ ನೀತಿ ಅಕ್ರಮವಾಗಿ ಜಾರಿ: ಮೀನಾಕ್ಷಿ ಲೇಖಿ

Last Updated 22 ಜುಲೈ 2022, 15:30 IST
ಅಕ್ಷರ ಗಾತ್ರ

ನವದೆಹಲಿ:ದೆಹಲಿ ಸರ್ಕಾರವು ಅಬಕಾರಿ ನೀತಿ 2021–22 ಅನ್ನುಅಕ್ರಮವಾಗಿಜಾರಿಗೊಳಿಸಿದೆ ಎಂದು ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಆರೋಪಿಸಿದ್ದಾರೆ.

ಅರವಿಂದ ಕೇಜ್ರಿವಾಲ್‌ ನೇತೃತ್ವದ ಸರ್ಕಾರದ ಅಬಕಾರಿ ನೀತಿ ಜಾರಿಗೆ ಸಂಬಂಧಿಸಿದಂತೆ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ.ಸಕ್ಸೇನಾ ಅವರು ಶುಕ್ರವಾರ ಸಿಬಿಐ ತನಿಖೆಗೆಆದೇಶಿಸಿದ್ದಾರೆ. ಇದಾದ ಕೆಲ ಗಂಟೆಗಳ ಅಂತರದಲ್ಲಿ ಲೇಖಿ ಈ ಹೇಳಿಕೆ ನೀಡಿದ್ದಾರೆ.

ನಗರದ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಲೇಖಿ, 'ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಈ ಹಗರಣಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನೀಡಬೇಕು. ನಿಯಮಗಳನ್ನು ಅನುಸರಿಸದೆ, ಪತ್ರಗಳಿಗೆ ಸಹಿ ಮಾಡುವ ಆತುರವೇನಿತ್ತು?' ಎಂದು ಪ್ರಶ್ನಿಸಿದ್ದಾರೆ.

ದೆಹಲಿಯಲ್ಲಿಮದ್ಯ ಕಂಪೆನಿಗಳಿಗೆ ಲಾಭ ಮಾಡಿಕೊಡುವ ದೃಷ್ಟಿಯಿಂದ ಬೆಲೆ ನಿಗದಿಯನ್ನು ಪ್ರೋತ್ಸಾಹಿಸಿಕೇಜ್ರಿವಾಲ್‌ ಸರ್ಕಾರವು, ನಿಯಮಗಳನ್ನು ಉಲ್ಲಂಘಿಸಿದೆ.ರಾಷ್ಟ್ರ ರಾಜಧಾನಿಯಲ್ಲಿನ ಈ ಅಕ್ರಮದಿಂದಾಗಿ ಸಾರ್ವಜನಿಕ ಖಜಾನೆಗೆ ಅಪಾರ ನಷ್ಟ ಉಂಟಾಗಿದೆ ಎಂದುಲೇಖಿ ಕಿಡಿ ಕಾರಿದ್ದಾರೆ.

ಮದ್ಯ ತಯಾರಿಕಾ ಕಂಪೆನಿಗಳಿಗೆ ಅಬಕಾರಿ ಇಲಾಖೆ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನೀಡಿದ್ದ ನೋಟಿಸ್‌ಗಳಿಗೆ ಸಂಬಂಧಿಸಿದಂತೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದೂ ಕೇಜ್ರಿವಾಲ್‌ ಅವರನ್ನು ಕೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT