ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ನಗರ ನ್ಯಾಯಾಲಯ, ಐವರು ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಈ ಕುರಿತು ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್‌ಪಾಲ್ ಆದೇಶ ಹೊರಡಿಸಿದರು.
ಆರೋಪಿಗಳಾದ ಶರತ್ ರೆಡ್ಡಿ, ಅಭಿಷೇಕ್ ಬೋಯಿನ್‌ಪಲ್ಲಿ, ವಿಜಯ್ ನಾಯರ್, ಬಿನೋಯಿ ಬಾಬು ಮತ್ತು ಸಮೀರ್ ಮಹೇಂದ್ರು ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಲಾಗಿದೆ.
ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಈಗಾಗಲೇ ಎಫ್‌ಐಆರ್ ದಾಖಲಿಸಿದೆ.
ಸಿಬಿಐ ಮತ್ತು ಇ.ಡಿ ಎಫ್‌ಐಆರ್‌ಗಳಲ್ಲಿ ದೆಹಲಿಯ ಉಪಮುಖ್ಯಮುಂತ್ರಿ ಮನೀಶ್ ಸಿಸೋಡಿಯಾ ಮತ್ತು ಅಬಕಾರಿ ಇಲಾಖೆಯ ಇತರೆ ಅಧಿಕಾರಿಗಳು ಆರೋಪಿಗಳೆಂದು ಹೆಸರಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.