ಬುಧವಾರ, ಸೆಪ್ಟೆಂಬರ್ 28, 2022
28 °C

ಸಿಸೋಡಿಯಾ ಸೇರಿದಂತೆ 15 ಜನರನ್ನು ಎಫ್‌ಐಆರ್‌ನಲ್ಲಿ ಹೆಸರಿಸಿದ ಸಿಬಿಐ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ 15 ಜನರನ್ನು ಸಿಬಿಐ ಆರೋಪಿಗಳೆಂದು ಹೆಸರಿಸಿದೆ.

ಎಫ್‌ಐಆರ್ ಅನ್ನು ಭಾರತೀಯ ದಂಡ ಸಂಹಿತೆಯ (ಐಪಿಸಿ) ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾಗಿದೆ. ಇದರಲ್ಲಿ ಕ್ರಿಮಿನಲ್ ಪಿತೂರಿ, ಸುಳ್ಳು ಖಾತೆ ಸೃಷ್ಟಿ ಹಾಗೂ ಅಧಿಕ ಲಾಭದ ಆರೋಪಗಳು ಸೇರಿವೆ.

ಮನೀಶ್ ಸಿಸೋಡಿಯಾ ಅವರ ಮನೆ ಸಹಿತ ದೆಹಲಿ ಎನ್‌ಸಿಆರ್‌ನ 21 ಸ್ಥಳಗಳಲ್ಲಿ ದಾಳಿ ನಡೆಸಿರುವ ಸಿಬಿಐ, ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ಸಿಬಿಐ ದಾಳಿಯನ್ನು ಸ್ವಾಗತಿಸಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ.

ಇವನ್ನೂ ಓದಿ...

ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ

ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ; ದೆಹಲಿ ಮಾದರಿ ತಡೆಯಲು ಯತ್ನ: ಕೇಜ್ರಿವಾಲ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು